ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ

ಬಳ್ಳಾರಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ 25ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಳ್ಳಾರಿ, ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದಾರೆ.

ಬಾಣಂತಿಯರ ಸರಣಿ ಸಾವಿನ ಬಗ್ಗೆ ಲೋಕಾಯುಕ್ತ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಗೆ   ಪ್ರತ್ಯೇಕ ತಂಡಗಳಲ್ಲಿ ಭೇಟಿ ನೀಡಿದ್ದು, ಬಾಣಂತಿಯರ ಸಾವಿನ ಕುರಿತು ತನಿಖೆ ಕೈಗೊಂಡಿದ್ದಾರೆ. ಹೆರಿಗೆ, ಐಸಿಯು, ಔಷಧಿ ದಾಸ್ತಾನು ಉಗ್ರಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ನೇತೃತ್ವದ ನಿಯೋಗವೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದೆ. ಎಂಎಸ್ಸಿ ಹೇಮಲತಾ ನಾಯಕ, ಮಾಜಿ ಶಾಸಕಿ ರೂಪಾಲಿ ನಾಯ್ಕ ಸೇರಿ ಮಹಿಳಾ ಮುಖಂಡರು ಆಗಮಿಸಿದ್ದಾರೆ. ಹೆರಿಗೆ ವಾರ್ಡ್, ಐಸಿಯು, ಔಷಧಿ ಉಗ್ರಾಣ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *