ಈ ಭಾಗಗಳಲ್ಲಿ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ

ಈ ಭಾಗಗಳಲ್ಲಿ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ

ಇದೀಗ ರಣಭೀಕರ ಚಳಿ ನಡುವೆಯೂ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೀಗ ದೇಶಾದ್ಯಂತ ಭೀಕರ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ ಭಾರತದಲ್ಲಿ ದಟ್ಟ ಮಂಜಿನ ನಡುವೆ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಇತರ ಉತ್ತರದ ರಾಜ್ಯಗಳ ಕೆಲವು ಭಾಗಗಳಲ್ಲಿ ತಾಪಮಾನ ಪ್ರಮಾಣ ಕೂಡ ಕಡಿಮೆಯಾಗುತ್ತಲಿದ್ದು, ಇಲ್ಲಿನ ಕೆಲವೆಡೆ ಭಾರೀ ಚಳಿ ಹಿನ್ನೆಲೆ ಇಲ್ಲಿನ ಹಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಧ್ಯಪ್ರದೇಶ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 7 ದಿನಗಳ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಭಾರೀ ಚಳಿ ಮುನ್ಸೂಚನೆ ಹಿನ್ನಲೆ ಇಂದು (ಡಿಸೆಂಬರ್ 23) ಹಿಮಾಚಲ ಪ್ರದೇಶದ ಉನಾ, ಹಮೀರ್ಪುರ, ಬಿಲಾಸ್ಪುರ್ ಮತ್ತು ಮಂಡಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಡಿಸೆಂಬರ್ 28 ರವರೆಗೆ ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಲೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ. ಇದರ ಪರಿಣಾಮ ಡಿಸೆಂಬರ್ 26ರ ರಾತ್ರಿಯಿಂದ ವಾಯುವ್ಯ ಭಾರತದ ಮೇಲೆ ಬೀರುವ ಸಾಧ್ಯತೆಯಿದೆ. ಡಿಸೆಂಬರ್ 27ರಂದು ನೈಋತ್ಯ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುವ ನಿರೀಕ್ಷೆಯಿದೆ. ಇನ್ನು ಮುಂದಿನ ಹಲವು ದಿನಗಳವರೆಗೆ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಶೀತ ಹೆಚ್ಚಿರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ಭಾರತೀಯ ಹವಾಮಾನ ಇಲಾಖೆ ರವಾನಿಸಿದೆ.

ಮಳೆ, ಚಳಿ ಮುಂದುವರೆಯುವ ಮುನ್ಸೂಚನೆ: ಮುಂದಿನ ಒಂದು ವಾರವಡೀ ವಾಯುವ್ಯ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಡಿಸೆಂಬರ್ 25ರ ವರೆಗೆ ನಾಗಾಲ್ಯಾಂಡ್, ಮೇಘಾಲಯ ಮತ್ತು ಅಸ್ಸಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಡಿಸೆಂಬರ್ 25ರವರೆಗೆ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಬಾಲ್ಟಿಸ್ತಾನ್, ಗಿಲ್ಗಿಟ್, ಮುಜಫರಾಬಾದ್ ಮತ್ತು ಲಡಾಖ್, ಡಿಸೆಂಬರ್ 23ರಂದು ಪಶ್ಚಿಮ ರಾಜಸ್ಥಾನಚಂಡೀಗಢ ಮತ್ತು ಹರಿಯಾಣದಲ್ಲೂ ಕೂಡ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.

ಡಿಸೆಂಬರ್ 24ರಂದು ಉತ್ತರ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಇದೇ ವೇಳೆ ಜಾರ್ಖಂಡ್ ಮತ್ತು ಪೂರ್ವ ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಇನ್ನು ಡಿಸೆಂಬರ್ 28ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಮದ ಪ್ರಮಾಣ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *