ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳ ಬಸ್ ದರ ಏರಿಕೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ನಿಗಮನ ಗಳ ಬಹುದಿನದ ಬೇಡಿಕೆ ಈಡೇರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿದರು. ವಿಪಕ್ಷ ನಾಯಕರ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಗುರುವಾರ ಸರ್ಕಾರ ಬಸ್ ಟಿಕೆಟ್ ದರವನ್ನು ಶೇಕಡಾ 15% ಏರಿಕೆ ಮಾಡಿ ನಿರ್ಧಾರ ಘೋಷಿಸಿದ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿ ಆರ್.ಅಶೋಕ್ ಅವರು ಪೋಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿದೆ. ಇದೀಗ ಸಾರ್ವಜನಿಕ ಸಾರಿಗೆ ಬಸ್ ದರ ಶೇಕಡಾ 15 ಏರಿಕೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಿ. ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಅವರು ಅಸಮಾಧಾನ ಹೊರ ಹಾಕಿದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೆಚ್ಚಾದ ಬೆಲೆ ಏರಿಕೆ, ದರ ಏರಿಕೆ ಪಸ್ತಾವನೆ, ಉದ್ದೇಶಗಳ ಬಗ್ಗೆ ಪಟ್ಟಿ ನೀಡಿದ್ದಾರೆ. ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದಿರುವ ಆರ್.ಅಶೋಕ್ ಅವರು ಅವರ ದುರಾಡಳಿತದಲ್ಲಿ ಹಲವು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಪಟ್ಟಿ ನೀಡುವ ಮೂಲಕ ಲೇವಡಿ ಮಾಡಿದ್ದಾರೆ. ನಿಮ್ಮ ಬೆಲೆ ಏರಿಕೆ ವಿರುದ್ಧ ಶೀಘ್ರದಲ್ಲೇ ಕನ್ನಡಿಗರು ದಂಗೆ ಏಳುತ್ತಾರೆ. ಅದು ಕನ್ನಡಿಗರಿಗೆ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಆರ್.ಅಶೋಕ್ ಕೊಟ್ಟ ಬೆಲೆ ಏರಿಕೆ ಪಟ್ಟಿ * ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ * ಆಸ್ತಿ ತೆರಿಗೆ ಏರಿಕೆ ಅನಿವಾರ್ಯ * ಮುದ್ರಾಂಕ ದರ ಏರಿಕೆ ಅನಿವಾರ್ಯ * ನೀರಿನ ದರ ಏರಿಕೆ ಅನಿವಾರ್ಯ * ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ ಅನಿವಾರ್ಯ * ಹಾಲಿನ ದರ ಏರಿಕೆ ಅನಿವಾರ್ಯ * ಬಸ್ ದರ ಏರಿಕೆ ಅನಿವಾರ್ಯ
ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಪರಿಷ್ಕರಣೆ ಸುದ್ದಿ ಮುನ್ನೆಲೆಗೆ ಬರುತ್ತಿದ್ದಂತೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯಿಸಿದರು. ಖರ್ಚು, ವೆಚ್ಚ ನಿರ್ವಹಣೆಗೆ ಆರ್ಥಿಕ ತೊಂದರೆ ಆಗಿರುವ ಕಾರಣ ನೌಕರರು, ಬೆಲೆ ಏರಿಕೆ ಬಗ್ಗೆ ಮನವಿ ಮಾಡುತ್ತಲೇ ಇದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ನಿರ್ಧರಿಸಲಿದೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕರ್ನಾಟಕ ಬಿಜೆಪಿಯು ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿದರೆ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಹೇಳಿತ್ತು. ವಿಧಾನ ಪರಿಷತ್ ಸದಸ್ಯ ಸಹ ಸಿಟಿ ರವಿ ಅವರು ಸಹ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯದಂತೆ ಆಗ್ರಹಿಸಿದ್ದರು. ಇದೀಗ ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಿಸಿದ್ದರಿಂದ ಬಿಜೆಪಿಯು ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಜೊತೆಗೆ ಇದರ ವಿರುದ್ಧವು ಪ್ರತಿಭಟನೆಗೆ ರೂಪಿಸುವ ಸಾಧ್ಯತೆ ಇದೆ.