ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಸಲ್ಲಿಸಲಿದ್ದಾರೆ.
ಇದೀಗ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಬದಲಿಗೆ ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎನ್ನುವ ಅರ್ಜಿ ವಿಚಾರಣೆ ವಿಚಾರಣೆ ನಡೆಯುತ್ತಿದೆ. ಇದರ ನಡುವೆ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ಗೆ ಸಂಕಷ್ಟ ಎದುರಾಗಿದೆ.
ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ಗೆ ED ನೋಟಿಸ್
ಜಾರಿ ನಿರ್ದೇಶನಾಲಯ (ED) ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ. ನೋಟಿಸ್ ಬಂದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆಯಂತೆ.
ಲೋಕಾಯುಕ್ತ ತನಿಖಾ ವರದಿ ಸೋಮವಾರ ಕೋರ್ಟ್ಗೆ ಸಲ್ಲಿಕೆ
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.
ಈ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಪತ್ನಿಯಾಗಲಿ ಭಾಗಿಯಾಗಿಲ್ಲ
ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ. ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಟಿ.ಎಸ್ ಶ್ರೀವತ್ಸ ಅವರು, ಹಗರಣದಲ್ಲಿ ಸಿದ್ದರಾಮಯ್ಯ, ಪಾರ್ವತಿ ಅವರ ತಪ್ಪಿಲ್ಲ ಅಂತ ಲೋಕಾಯುಕ್ತ ಬಿ ರಿಪೋರ್ಟ್ ಹಾಕಲು ಮುಂದಾಗಿದೆ. ಯಾವ ರೀತಿ ತನಿಖೆ ಮಾಡಿದ್ದಾರೋ ಗೊತ್ತಿಲ್ಲ. ನಾನು ಮೊದಲಿನಿಂದಲೂ ಹೇಳಿದ್ದೇನೆ., ಲೋಕಾಯುಕ್ತದಲ್ಲಿ ನ್ಯಾಯಯುತ ತನಿಖೆ ಆಗಲ್ಲ ಎಂದು ಹೇಳಿದರು.