ಬೆಂಗಳೂರು || ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ: KDA ಕಳವಳ

ಬೆಂಗಳೂರು || ಬ್ಯಾಂಕ್ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ: KDA ಕಳವಳ

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಆಡಳಿತಾತ್ಮಕವಾಗಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಎಚ್ಚರಿಸಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದು ಹೇಳಿದರು,

ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್‌ಗಳು ಜನಸ್ನೇಹಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕ್‌ಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ, ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

‘ಬ್ಯಾಂಕ್‌ಗಳಲ್ಲಿನ ಹೊರ ಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯ. ಈ ಕುರಿತಂತೆ ಟೆಂಡರ್‌ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿಧಿಸಬೇಕು. ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಬೋಧಿಸಲು ಬ್ಯಾಂಕ್‌ಗಳ ತರಬೇತಿ ಕೇಂದ್ರಗಳಲ್ಲಿ ಕನ್ನಡ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಕ್ರಮವಹಿಸಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *