ಬೆಂಗಳೂರು || ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

Metroನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ, ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರು: 2025 ರ ವರ್ಷದ ಆರಂಭದಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್ಸಿಎಲ್ ಇದೀಗ ಜನತೆಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳದ ನಿರ್ಧಾರಕ್ಕೆ ಸದ್ಯ ಬಿಎಂಆರ್ಸಿಎಲ್ ತಾತ್ಕಾಲಿಕ ಬ್ರೇಕ್ ಹಾಕಿದೆ.

ಬೆಂಗಳೂರಿನ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ಸಿಎಲ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಮೆಟ್ರೋ ಟಿಕೆಟ್ ದರ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಅನುಮಾನ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ನಮ್ಮ ಮಟ್ರೋ ಪ್ರಮಾಣಿಕರಿಗೆ ಗುಡ್ ನ್ಯೂಸ್ ನೀಡಿದಂತಾಗಿದೆ.

ಕಳೆದ ವಾರವಷ್ಟೇ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್ಸಿಎಲ್ ಸಭೆ ನಡೆಸಿತ್ತು. ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಿಸುವ ವಿಚಾರದಲ್ಲಿ ಬಿಎಂಆರ್ಸಿಎಲ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದ್ದು, ಶೇ 45ರಷ್ಟು ದರ ಏರಿಕೆಗೆ ಮುಂದಾಗಿದ್ದರೂ, ಆ ಬಗ್ಗೆ ಕೇಂದ್ರ ಸರ್ಕಾರ ವರದಿ ಕೋರಿದ್ದು, ಅನುಮೋದನೆ ನೀಡಿಲ್ಲ ಎನ್ನಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಮೆಟ್ರೋ ಟಿಕೆಟ್ ದರ ಕೂಡ ಹೆಚ್ಚಳವಾದರೆ ಜನರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಯಾಣ ದರ ಏರಿಕೆ ನಿರ್ಧಾರ ಅಂತಿಮಗೊಳಿಸುವುದಕ್ಕೂ ಮುನ್ನ ವರದಿ ಸಲ್ಲಿಸುವಂತೆ ಕೇಂದ್ರ ತಂಡ ಸೂಚನೆ ನೀಡಿದೆ. ಹೀಗಾಗಿ ವರದಿ ಸಲ್ಲಿಕೆಗೆ ಬಿಎಂಆರ್ಸಿಎಲ್ ಸಮಯ ಕೇಳಿದೆ.

ಬೆಂಗಳೂರಿನ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ಸಿಎಲ್ ಫೆಬ್ರವರಿ1 ರಿಂದ ಮುಂದಾಗಿತ್ತು. ಅದಕ್ಕಾಗಿ ಪ್ರಯಾಣಿಕರಿಂದ ಅಭಿಪ್ರಾಯಗಳು, ಸಲಹೆಗಳನ್ನೂ ಸ್ವೀಕರಿಸಿತ್ತು. ಪ್ರಯಾಣಿಕರಿಂದ ದರ ಏರಿಕೆಗೆ ವಿರೋಧ ವ್ಯಕ್ತವಾಗಿದ್ದರೂ ನಿರ್ವಹಣೆ ನೆಪವೊಡ್ಡಿ ದರ ಏರಿಕೆ ಬಿಎಂಆರ್ಸಿಎಲ್ ಮುಂದಾಗಿತ್ತು ಎಂದು ತಿಳಿದು ಬಂದಿತ್ತು. ಇದೀಗ ಬಿಎಂಆರ್ಸಿಎಲ್ ನಿರ್ಧಾರಕ್ಕೆ ಕೇಂದ್ರದಿಂದ ತಾತ್ಕಾಲಿಕ ತಡೆಯೊಡ್ಡಲಾಗಿದೆ. ಸದ್ಯ ನಮ್ಮ ಮೆಟ್ರೋ ಪ್ರಮಾಣಿಕರಿಕೆ ಗುಡ್ ನ್ಯೂಸ್ ನೀಡಿದಂತಾಗಿದೆ.

2017 ರಲ್ಲಿ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿತ್ತು. ಬಳಿಕ ಪ್ರಯಾಣ ದರ ಪರಿಷ್ಕರಣೆ ಮಾಡುವ ಪ್ರಯತ್ನ ಮಾಡಿರಲಿಲ್ಲ. ಆದರೆ, ಇದೀಗ ವರ್ಷದ ಆರಂಭದಲ್ಲೇ ಪ್ರಯಾಣ ದರ ಏರಿಕೆಗೆ ಮುಂದಾಗಿದ್ದ ಬಿಎಂಆರ್ಸಿಎಲ್ ನಡೆಗೆ ಹಿನ್ನಡೆಯಾಗಿದೆ. ಸದ್ಯ ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ಗೆ ಕನಿಷ್ಠ ದರ 10 ರೂ. ಹಾಗೂ ಗರಿಷ್ಠ ದರ 60 ರೂ. ಇದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಏರಿಕೆಗೆ ನಿಗಮ ಮುಂದಾಗಿತ್ತು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *