ಚೆನೈ || ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರ*ಪ್

ದಕ್ಷಿಣ ಕನ್ನಡ || ಇವತ್ತಿನ ಮೇಲೆ ಸಾಮೂಹಿಕ ಅ*ಚಾರ ಆರೋಪ : ಮೂವರ ಬಂಧನ

ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಬಂಧಿತ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾರೆ.

ವಿಷಯ ತಿಳಿದ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.

ಮೊದಲು ಒಬ್ಬ ಶಿಕ್ಷಕ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಷಯದ ತಿಳಿದ ಇನ್ನುಳಿದ ಇಬ್ಬರು ಶಿಕ್ಷಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ದಿನೇಶ್ ಕುಮಾರ್ ತಿಳಿಸಿದ್ದಾರೆ. ಇತ್ತ ಪ್ರಕರಣ ದಾಖಲಿಸುತ್ತಿದ್ದಂತೆ ಕೃಷ್ಣಗಿರಿ ಜಿಲ್ಲಾ ಪ್ರಧಾನ ಶಿಕ್ಷಣಾಧಿಕಾರಿಗಳು ಮೂವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *