ತುಮಕೂರು: ಸರಗಳ್ಳತನ ಮಾಡುತ್ತಿದ್ದ ಅಂತರ್ಜಿಲ್ಲಾ ಕಳ್ಳರನ್ನು ಬಂಧಿಸಿ ಅವರ ಬಳಿಯಿದ್ದ 5.4೦ ಲಕ್ಷ ಮೌಲ್ಯದ ಕಾರು, ಬೈಕ್ ಹಾಗೂ ಚಿನ್ನಾಭರಣಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ತಿಪಟೂರು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇರ್ಫಾನ್, ಅಸ್ಪಾನ್ ಮತ್ತು ಆಖಿಬ್ ಶರೀಫ್ ಬಂಧಿತ ಆರೋಪಿಗಳು. ಜ.28 ರಂದು ತಿಪಟೂರಿನಲ್ಲಿ ಅನಸೂಯ ರಾಜ್ ಅವರು ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್ನಲ್ಲಿ ಬಂದ ಖದೀಮರು ಅವರ ಕೊರಳಿನಲ್ಲಿದ್ದ 80 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಅನುಸೂಯ ರಾಜ್ ಅವರು ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಈ ಮೂವರು ಆರೋಪಿಗಳನ್ನು ಕಡೂರು ರೈಲ್ವೆ ಸ್ಟೇಷನ್ನಲ್ಲಿ ಬಂಧಿಸಿದ್ದಾರೆ. ಜತೆಗೆ ಅವರ ಬಳಿಯಿದ್ದ 67 ಗ್ರಾಂ ಚಿನ್ನದ ಮಾಂಗಲ್ಯ ಸರ, ಮಾರುತಿ 8೦೦ ಕಾರು ಹಾಗೂ ಒಂದು ದ್ವಿ ಚಕ್ರವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಘನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಪ್ರಕರಣವನ್ನು ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ.ಮರಿಯಪ್ಪ ಹಾಗೂ ಬಿ.ಎಸ್.ಅಬ್ದುಲ್ ಖಾದರ್ ರವರ ನೇತೃತ್ವದಲ್ಲಿ ತಿಪಟೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿನಾಯಕ ಶೆಟಗೇರಿ ಅವರ ಮಾರ್ಗದರ್ಶನದಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯ ವೆಂಕಟೇಶ್ ಸಿ, ಪೊಲೀಸ್ ಇನ್ಸ್ ಪೆಕ್ಟರ್, ಡಿ.ಕೃಷ್ಣಪ್ಪ, ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಚಿಕ್ಕಲಕ್ಕೇಗೌಡ ಮತ್ತು ಉಸ್ಮಾನ್ ಸಾಬ್ ಮತ್ತು ಸಿಬ್ಬಂದಿ ಮೋಹನ್ ಕುಮಾರ್, ಮೋಹನ್, ಲೋಕೇಶ್, ಯತೀಶ್, ಸಾಗರ್ ಅಂಬಿಗೇರ್, ಮಂಜುನಾಥ ಕುಪ್ಪಾಡ, ಮನೋಜ್ ಅವರ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಅವರು ಪ್ರಶಂಶಿಸಿದ್ದಾರೆ.