ಬೆಂಗಳೂರು || ಡಿ.ಕೆ.ಶಿವಕುಮಾರ್ ಸಿಎಂ ಆಗುವವರೆಗೆ ಬೆಂಗಳೂರು ಅಭಿವೃದ್ಧಿಗೆ ಬ್ರೇಕ್?

ಬೆಂಗಳೂರು || ಬಿಜೆಪಿಯವರಿಗೆ  ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

ಬೆಂಗಳೂರು : ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೇರುವ ಹಂಬಲದಲ್ಲಿದ್ದಾರೆ. ಇಲ್ಲಿವರೆಗೆ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹಗಲಿರುಳೆನ್ನದೆ ಆಕ್ಟೀವ್ ಆಗಿದ್ದ ಡಿಕೆ ಶಿವಕುಮಾರ್ ಅವರು ಸ್ವತಃ ದೇವರೇ ಬಂದರೂ ಇನ್ನೆರಡು ವರ್ಷ ಬೆಂಗಳೂರಿನ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಬ್ರೇಕ್ ಬೀಳುತ್ತಾ ಎನ್ನುವ ಪ್ರಶ್ನೆಗಳು ಕೂಡ ಎದ್ದಿವೆ.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಮೂರು ದಿನಗಳ ನಮ್ಮ ರಸ್ತೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆ ಭಗವಂತನೇ ಕೆಳಗಿಳಿದು ಬಂದರೂ ಇನ್ನೆರಡು ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ, ಏಕೆಂದರೆ ಅಷ್ಟೊಂದು ಕಷ್ಟ ಇಲ್ಲಿದೆ ಎಂದಿದ್ದರು. ಈ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಇನ್ನೆರಡು ಮೂರು ವರ್ಷ ಎಂದರೆ, ಕಾಂಗ್ರೆಸ್ ಸರ್ಕಾರದ ಅವಧಿ ಮುಗಿಯಲಿದೆ. ಆಗ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ. ಆ ಬಳಿಕವೇ ಬೆಂಗಳೂರಿನ ಅಭಿವೃದ್ಧಿ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇದೇ ಅರ್ಥದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಭವಿಷ್ಯದ ಬೆಂಗಳೂರಿಗೆ ಇವಾಗಿನಿಂದಲೇ ಒಳ್ಳೆಯ ಯೋಜನೆ ರೂಪಿಸಿದರೆ ಮಾತ್ರ ಎಲ್ಲವೂ ಸರಿಯಾಗುತ್ತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಈ ವಿಚಾರವಾಗಿ ರೆಕ್ಕೆಪುಕ್ಕ ಹುಟ್ಟಿಕೊಂಡಿದೆ.

ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲೂ ಉತ್ತಮವಾಗಿರುವಂತಹ ಯೋಜನೆಗಳನ್ನು ಈಗಿನಿಂದಲೇ ರೂಪಿಸಬೇಕು. ರಸ್ತೆ, ಫುಟ್ಪಾತ್, ಹಸಿರು ವಲಯ ಸೇರಿದಂತೆ ಎಲ್ಲವನ್ನೂ ಸುಸ್ಥಿತಿಯಲ್ಲಿಡಬೇಕು. ಇಲ್ಲದಿದ್ದರೆ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ ಎಂದಿದ್ದಾರೆ. ಈ ಇಂಜಿನಿಯರ್ಗಳು, ರಾಜಕಾರಣಿಗಳು ಹಾಗೂ ಪ್ರತಿನಿಧಿಗಳು ಇವತ್ತು ಅಧಿಕಾರದಲ್ಲಿರ್ತಾರೆ, ನಾಳೆ ಹೋಗ್ತಾರೆ. ಅಧಿಕಾರ ಸಿಕ್ಕಾಗ ಒಳ್ಳೆಯ ಕೆಲಸ ಮಾಡಬೇಕು ಎಂದಿದ್ದಾರೆ.

ಆದರೆ, ಮುಂದಿನ ಬಾರಿ ಸಿಎಂ ಆಗಬೇಕೆಂದಿರುವ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಬೆಂಗಳೂರು ಅಭಿವೃದ್ಧಿ ಎನ್ನೆರಡು ಮೂರು ವರ್ಷ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅಭಿವೃದ್ಧಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಅವರು ಸಿಎಂ ಆದ ಬಳಿಕವೇ ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ಕ್ರೆಡಿಟ್ ಪಡೆಯಉ ಹೊರಟಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ವಾಗ್ದಾಳಿ ನಡೆಸಿದ್ದಾರೆ. “ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುತ್ತೇನೆ ಎಂದು ಡಂಗೂರ ಸಾರಿದ್ದ ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಮಂತ್ರಿಗಳ ಹೊಸ ವರಸೆ ನೋಡಿ. ಸ್ವತಃ ದೇವರೇ ಬಂದರೂ 2-3 ವರ್ಷ ಬೆಂಗಳೂರಿನ ಅಭಿವೃದ್ಧಿ ಸಾಧ್ಯವಿಲ್ಲವಂತೆ. ಇದು ಡಿಸಿಎಂ ಸಾಹೇಬರ ನುಡಿಮುತ್ತುಗಳು” ಎಂದು ವ್ಯಂಗ್ಯವಾಡಿದ್ದಾರೆ. ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ನಿಮ್ಮ ಕೈಲಾಗದಿದ್ದರೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನ ಬೇರೆ ಯಾರಿಗಾದರೂ ಸಮರ್ಥರಿಗೆ ಬಿಟ್ಟುಕೊಡಿ. ನಿಮ್ಮ ರಾಜಕೀಯ ಪ್ರತಿಷ್ಠೆಗೆ, ಅಧಿಕಾರದ ದುರಾಸೆಗೆ ಬೆಂಗಳೂರು ನಗರದ ಅಭಿವೃದ್ಧಿಯನ್ನು ಯಾಕೆ ಬಲಿ ಕೊಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *