ಇಸ್ಲಾಮಾಬಾದ್: ತನ್ನ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ ಹಿನ್ನೆಲೆ ಪಾಕಿಸ್ತಾನ ಪಂಬಾಬ್‌ನ 100ಕ್ಕೂ ಹೆಚ್ಚು ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ವರದಿಯಾಗಿದೆ.
ಪಂಜಾಬ್ ಪೊಲೀಸರ ಮಾಹಿತಿ ಪ್ರಕಾರ, ಸೇವಯಿಂದ ವಜಾಗೊಳಿಸಲಾದ ಅಧಿಕಾರಿಗಳು ಹಲವು ಸಂದರ್ಭದಲ್ಲಿ ಗೈರಾಗಿದ್ದರು. ಅಲ್ಲದೇ ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.
ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಲಾಹೋರ್‌ನ ಗಡಾಫಿ, ಕರಾಚಿ ಹಾಗೂ ರಾವಲ್ಪಿಂಡಿ ಮೈದಾನಗಳು ಆತಿಥ್ಯ ವಹಿಸಿವೆ. ಹಾಗಾಗಿ ಗೊತ್ತುಪಡಿಸಿದ ಹೋಟೆಲ್‌ಗಳಿಗೆ ಪ್ರವಾಣಿಸುವ ತಂಡಗಳಿಗೆ ಭದ್ರತೆ ಒದಗಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಆದ್ರೆ ಅವರೆಲ್ಲರೂ ಜವಾಬ್ದಾರಿ ತೆಗೆದುಕೊಳ್ಳಲು ಸಂಪೂರ್ಣವಾಗಿ ನಿರಾಕರಿಸಿದ್ದರು. ಈ ಹಿನ್ನೆಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ
ಇತ್ತೀಚೆಗಷ್ಟೇ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 (Champions Trophy 2025) ವೀಕ್ಷಣೆಗೆ ಆಗಮಿಸಿರುವ ವಿದೇಶಿಯರನ್ನು ಅಪಹರಿಸಿ ಸುಲಿಗೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿತ್ತು. ಇಸ್ಲಾಮಿಕ್ ಸ್ಟೇಟ್ (Islamic State) ಖೊರಾಸನ್ ಪ್ರಾಂತ್ಯದಿಂದ ಸಂಭಾವ್ಯ ಬೆದರಿಕೆಯ ಬಗ್ಗೆ ಪಾಕ್ ಇಂಟಲಿಜೆನ್ಸ್ ವರದಿ ನೀಡಿತ್ತು.