ಮಂಡ್ಯ : ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ ದರ್ಶನ್.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ಅದರಂತೆ ಈ ವರ್ಷವೂ ಸಾಮೂಹಿಕ ವಿವಾಹ ನಡೆಯಿತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮಾಂಗಲ್ಯ ವಿತರಣೆ ಮಾಡಿದರು. ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ-ಶರ್ಟ್ ವಿತರಣೆ ಮಾಡಿದರು
ಶ್ರೀರಾಮಾಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸಮ್ಮುಖದಲ್ಲಿ ಬೆಳಗ್ಗೆ 10:10ರ ಶುಭಲಗ್ನದಲ್ಲಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಾಂಗಲ್ಯಧಾರಣೆಯಾಗುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ಅಕ್ಷತೆ ಹಾಕುವ ಮೂಲಕ ವಧು-ವರರಿಗೆ ಆಶೀರ್ವಾದಿಸಿದರು.

ವಿಜಯಲಕ್ಷ್ಮಿದರ್ಶನ್ ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟುತ್ತಿರುವುದು ಒಳ್ಳೆಯ ನಿರ್ಧಾರ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಜೀವನ ಸುಖ, ನೆಮ್ಮದಿ ದೊರಕಲಿ, ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.