ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಂತುಕೊOಡು ಬಜೆಟ್ ಓದಲಾರಂಭಿಸಿದರು. ಆದರೆ ಮಂಡಿನೋವಿನಿOದ ಬಳಲುತ್ತಿರುವುದರಿಂದ ಬಜೆಟ್ ಮಂಡನೆಯನ್ನು ಕುಳಿತುಕೊಂಡು ಓದಲಾರಂಭಿಸಿದ್ದಾರೆ. ಅದಕ್ಕೂ ಮುನ್ನ ಸ್ಪೀಕರ್ ಅವರ ಅನುಮತಿ ಪಡೆದುಕೊಂಡರು.
ಬ್ರ್ಯಾOಡ್ ಬೆಂಗಳೂರಿನ 21ಯೋಜನೆಗೆ 1800ಕೋಟಿ ಘೋಷಣೆ
ಬ್ರಾಂಡ್ ಬೆಂಗಳೂರಿಗೆ 1800 ಕೋಟಿ ರೂಪಾಯಿ ವೆಚ್ಚದಲ್ಲಿ 21 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಹವಾಮಾನ ವೈಪರೀತ್ಯಗಳನ್ನು ನಿಯಂತ್ರಿಸಲು ಹಾಗೂ ಒಳಚರಂಡಿ ಮತ್ತು ಎಸ್ಟಿಪಿ ಸೌಲಭ್ಯಗಳನ್ನು ಸುಧಾರಿಸಲು 3000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಾವೇರಿ ನದಿಯಿಂದ ನೀರು ಪೂರೈಸುವ 5ನೇ ಹಂತದ ಯೋಜನೆಗೆ 555 ಕೋಟಿ ರೂಪಾಯಿಗಳನ್ನು ಬಳಸಲಾಗುವುದು, ಇದರಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಮೆಟ್ರೋ ಜಾಲವನ್ನು 98.60 ಕಿ.ಮೀ.ಗೆ ವಿಸ್ತರಿಸಲಾಗುವುದು, ಇದರಲ್ಲಿ ದೇವನಹಳ್ಳಿಗೆ ಸಂಪರ್ಕವೂ ಸೇರಿದೆ.
ಸಿದ್ದು ಬಜೆಟ್: ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ!
ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
AHP ಮನೆಗಳ ಫಲಾನುಭವಿಗಳಿಗೆ ಸಿಹಿ ಸುದ್ದಿ
ರಾಜೀವ್ ಗಾಂಧಿ ವಸತಿ ನಿಗಮದ AHP ಮನೆಗಳ ಫಲಾನುಭವಿಗಳಿಗೆ ಸಿಹಿ ಸುದ್ದಿ. ಮನೆ ಸಾಲದ ಮೇಲಿನ ಬಡ್ಡಿ ಇಳಿಕೆ ಮಾಡಲು ಸರ್ಕಾರವು ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ.