ಬೆಂಗಳೂರು : ಎಸ್ಸಿ ಎಸ್ಟಿ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.
ರಾಜ್ಯ ಬಜೆಟ್: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.
ಬ್ರ್ಯಾಂಡ್ ಬೆಂಗಳೂರಿನ 21ಯೋಜನೆಗೆ 1800ಕೋಟಿ ಘೋಷಣೆ
ಬ್ರಾಂಡ್ ಬೆಂಗಳೂರಿಗೆ 1800 ಕೋಟಿ ರೂಪಾಯಿ ವೆಚ್ಚದಲ್ಲಿ 21 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಹವಾಮಾನ ವೈಪರೀತ್ಯಗಳನ್ನು ನಿಯಂತ್ರಿಸಲು ಹಾಗೂ ಒಳಚರಂಡಿ ಮತ್ತು ಎಸ್ಟಿಪಿ ಸೌಲಭ್ಯಗಳನ್ನು ಸುಧಾರಿಸಲು 3000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಾವೇರಿ ನದಿಯಿಂದ ನೀರು ಪೂರೈಸುವ 5ನೇ ಹಂತದ ಯೋಜನೆಗೆ 555 ಕೋಟಿ ರೂಪಾಯಿಗಳನ್ನು ಬಳಸಲಾಗುವುದು, ಇದರಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಮೆಟ್ರೋ ಜಾಲವನ್ನು 98.60 ಕಿ.ಮೀ.ಗೆ ವಿಸ್ತರಿಸಲಾಗುವುದು, ಇದರಲ್ಲಿ ದೇವನಹಳ್ಳಿಗೆ ಸಂಪರ್ಕವೂ ಸೇರಿದೆ.