ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಾಗುವ ಸಂದರ್ಭದಲ್ಲಿ ಹಾಗೂ ಸಾಮಾನ್ಯ ದಿನಗಳಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಈಚೆ ಬೆಂಗಳೂರಿನಲ್ಲಿ ಸುರಿದ ಸಾಧಾರಣ ಮಳೆಗೆ ರಕ್ಷಾ ಎನ್ನುವ 3 ವರ್ಷದ ಮಗು ಸಾವನ್ನಪ್ಪಿತ್ತು. ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದಿತ್ತು. ಇದರಿಂದ ಮಗು ಸಾವನ್ನಪ್ಪಿದ್ದರೆ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ ಬೆನ್ನಲ್ಲೇ ಬಿಬಿಎಂಪಿಯು ಎಚ್ಚೆತ್ತುಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ-ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕೆಲಸಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಬೆಂಗಳೂರಿಗರು ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆ-ಕೊಂಬೆಗಳು ಕಂಡುಬಂದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಬಿಬಿಎಂಪಿಯ ಅರಣ್ಯ ವಿಭಾಗ ಹೇಳಿದೆ.
ವಿಧಾನಸಭಾ ಕ್ಷೇತ್ರವಾರು ದೂರು ನೀಡಬಹುದು: ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿಯ 8 ವಲಯಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮೂಲಕ(ವಾಟ್ಸ್ ಆ್ಯಪ್ ಮೂಲಕ ಫೋಟೋ, ಸ್ಥಳದ ವಿವರದೊಂದಿಗೆ) ಮಾಹಿತಿ ನೀಡುವಂತೆ ಬಿಬಿಎಂಪಿ ಹೇಳಿದೆ. ವಿಧಾನಸಭಾ ಕ್ಷೇತ್ರವಾರು ಹಾಗೂ ಸಂಪರ್ಕಿಸಬೇಕಾದ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಸಹ ಬಿಬಿಎಂಪಿಯು ಬಿಡುಗಡೆ ಮಾಡಿದೆ.
1. ಪಶ್ಚಿಮ ವಲಯ: ಈ ವಲಯದಲ್ಲಿ ರಾಜಾಜಿನಗರ, ಗೋವಿಂದರಾಜನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಸ್ಥರಾದ ವಲಯ ಅರಣ್ಯಾಧಿಕಾರಿ ಸುದರ್ಶನ್ – 9480683341. * ಮಹಾಲಕ್ಷ್ಮಿಪುರಂ, ಗಾಂಧಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ರಾಜೇಶ್ – 9449175978 ಇರಲಿದ್ದಾರೆ. 2. ಪೂರ್ವ ವಲಯ: * ಶಾಂತಿನಗರ, ಸಿ.ವಿ. ರಾಮನ್ ನಗರ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಸ್ಥರಾದ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ – 9380090027. * ಶಿವಾಜಿನಗರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ- ನಾಗೇಂದ್ರ.ಪಿ – 9113530344 ಸಂಖ್ಯೆಗೆ ಸಂಪರ್ಕಿಸಬಹುದು.
3. ದಕ್ಷಿಣ ವಲಯ: * ದಕ್ಷಿಣ ವಲಯದ ಮುಖ್ಯಸ್ಥರಾದ ವಲಯ ಅರಣ್ಯಾಧಿಕಾರಿ- ಚಂದ್ರಪ್ಪ ವಿ – 9480683655. * ಬಸವನಗುಡಿ, ವಿಜಯನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ಶಿವಣ್ಣ – 9164597895. * ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ಬಿ.ಬಿ ಮೇಟಿ – 9740576919 ಸಂಖ್ಯೆಗೆ ಕರೆ ಮಾಡಬಹುದಾಗಿದೆ. * ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಹರೀಶ್ ಹೆಚ್.ಆರ್ – 7676165253 4. ದಾಸರಹಳ್ಳಿ ವಲಯ: ದಾಸರಹಳ್ಳಿ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ರಾಜಪ್ಪ ಕೆ.ಎನ್ – 9448234928 ಸಂಖ್ಯೆಗೆ ಸಂಪರ್ಕಿಸಬಹುದು. 5. ಬೊಮ್ಮನಹಳ್ಳಿ ವಲಯ: * ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ನರೇಂದ್ರ ಬಾಬು – 9480685399 * ಬೊಮ್ಮನಹಳ್ಳಿ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ವಿನಯ್ – 7760933913 ಸಂಖ್ಯೆಗೆ ಸಂಪರ್ಕಿಸಬಹುದು.
6. ಯಲಹಂಕ ವಲಯ: * ಯಲಹಂಕ ವಿಧಾನಸಭಾ ಕ್ಷೇತ್ರಕ್ಕೆ ದೇವರಾಜ್ – 9964530649. * ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್.ಕೆ.ಪಿ – 9483139438 ಸಂಖ್ಯೆಗೆ ಸಂಪರ್ಕಿಸಬಹುದು. 7. ಆರ್.ಆರ್ ನಗರ ವಲಯ: * ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ರವೀಂದ್ರನಾಥ್, ಪ್ರಭಾರ ವಲಯ ಅರಣ್ಯಾಧಿಕಾರಿ – 6361903330 ಸಂಖ್ಯೆಗೆ ಸಂಪರ್ಕಿಸಬಹುದು. * ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಗದೀಶ್.ವಿ – 9880516322 ಸಂಖ್ಯೆಗೆ ಸಂಪರ್ಕಿಸಬಹುದು. 8. ಮಹದೇವಪುರ ವಲಯ: * ಮಹದೇವಪುರ, ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ಚಿದಾನಂದ್ – 9480685541 ಸಂಖ್ಯೆಗೆ ಸಂಪರ್ಕಿಸಬಹುದು. ಬಿಬಿಎಂಪಿಯು ವಿಧಾನಸಭಾ ಕ್ಷೇತ್ರವಾರು ಅಧಿಕಾರಿಗಳ ಮಾಹಿತಿ ನೀಡಿದೆ. ಸಾರ್ವಜನಿಕರು ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳ ಕುರಿತು ಮಾಹಿತಿ ಒದಗಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಎಲ್.ಜಿ ಸ್ವಾಮಿ ಅವರು ಮನವಿ ಮಾಡಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಬಿಬಿಎಂಪಿಯ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ ಸ್ವಾಮಿ ಅವರನ್ನು ಸಂಪರ್ಕಿಸಬಹುದಾಗಿದೆ. ಮೊ.ಸಂ: 9480683047 ಒಂದೇ ಮಳೆಗೆ ಸಮಸ್ಯೆ: ಇನ್ನು ಈಚೆಗೆ ಬೆಂಗಳೂರಿನಲ್ಲಿ ಸುರಿದ ಸಾಧಾರಣ ಮಳೆಗೆ ಯಲಹಂಕ ಸೇರಿದಂತೆ ವಿವಿಧ ಭಾಗದಲ್ಲಿ ಸಮಸ್ಯೆ ಎದುರಾಗಿತ್ತು. ಒಂದೇ ಮಳೆಯಿಂದಾಗಿ ಯಲಹಂಕ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ನೀರು ನಿಂತು ಸಮಸ್ಯೆ ಆಗಿತ್ತು. ಇದಾದ ಮೇಲೆ ಮರ ಹಾಗೂ ಮರದ ರಂಬೆ – ಕೊಂಬೆಗಳು ಬೀಳುವ ಸಂಖ್ಯೆಯೂ ಹೆಚ್ಚಳವಾಗಿದೆ. ಅಲ್ಲದೇ ಮರ ಬಿದ್ದು 3 ವರ್ಷದ ಮಗು ಸಹ ಸಾವನ್ನಪ್ಪಿದ ಮೇಲೆ ಬೆಂಗಳೂರಿನಲ್ಲಿ ತುರ್ತಾಗಿ ಅಪಾಯದ ಹಂತದಲ್ಲಿರುವ ಮರ ಹಾಗೂ ಮರದ ರಂಬೆ – ಕೊಂಬೆಗಳನ್ನು ತೆರವುಗೊಳಿಸುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. 1533ಕ್ಕೆ ಕರೆ ಮಾಡಬಹುದು: ಇನ್ನು ಬೆಂಗಳೂರಿನಲ್ಲಿ ನಗರದಲ್ಲಿ ಮಳೆಯಿಂದ ಏನಾದರು ಸಮಸ್ಯೆಯಾಗಿದ್ದರೆ ಕೂಡಲೇ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬಹುದು. ಇದರ ಜೊತೆಗೆ ಪಾಲಿಕೆ 8 ವಲಯಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಬಿಬಿಎಂಪಿ ಹೇಳಿದೆ. ಅಸಮಾಧಾನ: ಇನ್ನು ಬೆಂಗಳೂರಿನಲ್ಲಿ ಮೂಲಸೌಕರ್ಯ ಹಾಗೂ ಬಿಬಿಎಂಪಿಯ ಕಾರ್ಯವೈಖರಿಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ, ಬಿಬಿಎಂಪಿಯ ಬಣ್ಣ ಬಯಲಾಗುತ್ತಿದೆ ಎಂದು ಜನ ಸೋಷಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡುತ್ತಿದ್ದಾರೆ.