ಮಂಡ್ಯ; ಅಂತ್ಯಕ್ರಿಯೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಡೆದಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಬೆಂಗಳೂರಿನ ಜೆ.ಪಿ.ನಗರದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವOತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಹೈವೇ ಎಕ್ಸಿಟ್‌ನಲ್ಲಿ ನಡೆದಿದೆ. ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಎಕ್ಸ್ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿAದ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ.
ಮೃತರು ಸೋದರಮಾವನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸತ್ಯಾನಂದರಾಜೇ ಅರಸ್ ಅವರ ಮಾವ ತೀರಿ ಹೋಗಿದ್ದರು. ಹೀಗಾಗಿ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಮೃತ ಮಾವನನ್ನ ನೋಡಲು ಹೋರಟಿದ್ದರು. ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್
ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು. ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು. ಮೃತದೇಹಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.