ಬೆಂಗಳೂರು || ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ಉದ್ಯೋಗ ಮೇಳ, ವಿವರಗಳು

ಬೆಂಗಳೂರು || ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ಉದ್ಯೋಗ ಮೇಳ, ವಿವರಗಳು

ಬೆಂಗಳೂರು : ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಏಪ್ರಿಲ್ 5ರಂದು ಬೆಂಗಳೂರು ನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು.

ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಮತ್ತು ಕುಂಬಳಗೋಡು ಗ್ರಾಮ ಪಂಚಾಯಿತಿ ವತಿಯಿಂದ ಏಪ್ರಿಲ್ 5ರ ಬೆಳಗ್ಗೆ 9.30ರಿಂದ ಸಂಜೆ 4.30ರ ತನಕ ಉದ್ಯೋಗ ಮೇಳ ನಡೆಯಲಿದೆ.

ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯ ನಂ.14, ರಾಮೋಹಳ್ಳಿ ಕ್ರಾಸ್, ಮೈಸೂರು ರಸ್ತೆ, ಕುಂಬಳಗೋಡು. ಬೆಂಗಳೂರು ದಕ್ಷಿಣ ತಾಲ್ಲೂಕು. ಬೆಂಗಳೂರು-560074 ಇಲ್ಲಿ ಉದ್ಯೋಗ ಮೇಳ-2025 ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ/ ಬಿಸಿಎ/ ಬಿಟೆಕ್/ ಬಿಕಾಂ/ ಬಿಬಿಎ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964901444, 9964902444ಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ವೃತ್ತಿಪರ ತರಬೇತಿ ಕೋರ್ಸುಗಳಿಗೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಕರೆಯಲಾಗಿದೆ.

ನೇಮಕಾತಿಗೆ ತಡೆ: ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಹೊರಡಿಸಲಾದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ. ಸರ್ಕಾರ 2025ರ ಜನವರಿ 24 ಮತ್ತು 2024ರ ನವೆಂಬರ್ 25 ಮತ್ತು 2025ರ ಮಾರ್ಚ್ 29ರಂದು ಹೊರಡಿಸಿರುವ ಪತ್ರದಲ್ಲಿ ಸುತ್ತೋಲೆಯಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದು ಎಂದು ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ಅಧಿಸೂಚನೆ ವಾಪಸ್ ಪಡೆಯಲಾಗಿದೆ.

Leave a Reply

Your email address will not be published. Required fields are marked *