ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆಗೆ ಮನವಿ

ಮೈಸೂರು || Modi government ಸೊನ್ನೆ ಅಂಕ: Siddaramaiah

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆಗೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮೇಕೆದಾಟು ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆ ನೀಡಿ ಎಂದು  ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಆ ಮೂಲಕ ಕರ್ನಾಟಕ ರಾಜ್ಯದ ನೀರಾವರಿ ಯೋಜನೆ, ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬOಧಿಸಿದOತೆ ಸಿಎಂ ಸಿದ್ದರಾಮಯ್ಯ ಕೇಂದ್ರದ ಗಮನ ಸೆಳೆದಿದ್ದಾರೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಸಚಿವ ಸಿ.ಆರ್.ಪಾಟೀಲ್‌ರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ, ಪ್ರಸ್ತಾವನೆಗಳಿಗೆ ಅನುಮತಿ, ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು.

 ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *