ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರು ಇಂದು (ಏಪ್ರಿಲ್ 25) ಶುಕ್ರವಾರ ವಿಧಿವಶರಾಗಿದ್ದಾರೆ. 84 ವಯಸ್ಸಿನ ಕೆ.ಕಸ್ತೂರಿ ರಂಗನ್ ಅವರು ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ನೆಲೆಸಿದ್ದು, ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳಿದ್ದಾರೆ ಎಂದು ತಿಳಿದು ಬಂದಿದೆ.

ಕೆ. ಕಸ್ತೂರಿ ರಂಗನ್ ಅವರು ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ರಾಜ್ಯಸಭೆ ಸದಸ್ಯರು ಕೂಡ ಆಗಿದ್ದರು. ಅಲ್ಲದೇ ಪಶ್ಚಿಮ ಘಟ್ಟ ಸಂರಕ್ಷಣೆಗೆ ಕಸ್ತೂರಿ ರಂಗನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದರು. ಇಸ್ರೋ ಮುಖ್ಯಸ್ಥರಾಗಿ ಕೂಡ ಭಾರತದ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೆ.ಕಸ್ತೂರಿ ರಂಗನ್ ಅವರ ನಿಧನಕ್ಕೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.