ದಕ್ಷಿಣ ಕನ್ನಡ ಪೊಲೀಸರ ಉಪಸ್ಥಿತಿಯಲ್ಲಿ Muslim leaders ಸಭೆ ನಡೆಸಿಲ್ಲ: Minister Dinesh Gundu Rao

ದಕ್ಷಿಣ ಕನ್ನಡ ಪೊಲೀಸರ ಉಪಸ್ಥಿತಿಯಲ್ಲಿ Muslim leaders ಸಭೆ ನಡೆಸಿಲ್ಲ: Minister Dinesh Gundu Rao

ಬೆಂಗಳೂರು: ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಯಾವುದೇ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿಲ್ಲ. ಅಲ್ಲದೇ ಪ್ರತ್ಯೇಕವಾಗಿ ಮುಸ್ಲಿಂ ಸಮುದಾಯದ ಸಭೆಯನ್ನೂ ಕರೆದಿರಲಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಇತ್ತಿಚೆಗೆ ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಕುರಿತಂತೆ ನಾನು ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಆದರೆ ಕೆಲವು ಮಾಧ್ಯಮಗಳಲ್ಲಿ ಸಚಿವರು ಕೇವಲ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಮಾತ್ರ ಸಭೆ ನಡೆಸಿದ್ದಾರೆ ಎಂದು ತಪ್ಪಾಗಿ ವರದಿಯಾಗಿದೆ. ಗೃಹ ಸಚಿವರಾಗಲಿ, ನಾನಾಗಲಿ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಯಾವುದೇ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿಲ್ಲ. ಅಲ್ಲದೇ ಪ್ರತ್ಯೇಕವಾಗಿ ಮುಸ್ಲಿಂ ಸಮುದಾಯದ ಸಭೆಯನ್ನೂ ಕರೆದಿರಲಿಲ್ಲ ಎಂದು ತಿಳಿಸಿದ್ದಾರೆ.

ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿಲ್ಲ: ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಮಾತ್ರ ಇಬ್ಬರು ಸಚಿವರು ಸಭೆ ನಡೆಸಿದ್ದೇವೆ. ಸಚಿವರು ಸರ್ಕಿಟ್ ಹೌಸ್ನಲ್ಲಿ ಇದ್ದ ವೇಳೆ ಮುಸ್ಲಿಂ ಸೇರಿದಂತೆ ಇತರ ಸಮುದಾಯದ ಹಾಗೂ ಸಂಘ ಸಂಸ್ಥೆಗಳ ಮುಖಂಡರ ನಿಯೋಗ ಭೇಟಿ ನೀಡಿತ್ತು. ನಿಯೋಗದ ಅಹವಾಲುಗಳನ್ನು ಆಲಿಸಿದ್ದೇವೆಯೇ ಹೊರತು ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ. ಬೆಳಗ್ಗೆ 7 ಗಂಟೆಯಿಂದ 11 ಗಂಟೆವರೆಗೆ ಇಬ್ಬರೂ ಸರ್ಕಿಟ್ ಹೌಸ್ನಲ್ಲಿ ತಂಗಿದ್ದೆವು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳಿಗೆ ಭೇಟಿ ನೀಡಲು ಅವಕಾಶವಿತ್ತು. ಮೇಲೆ ತಿಳಿಸಲಾದ ನಿಯೋಗದ ಹೊರತಾಗಿ, ಬೇರೆ ಇತರ ಮುಖಂಡರು ಹಾಗೂ ನಿಯೋಗಗಳಿಗೆ ಸಚಿವರನ್ನು ಭೇಟಿ ಮಾಡಲು ಸಮಯವಕಾಶವಿತ್ತು ಎಂದಿದ್ದಾರೆ.

ಸಭೆ ನಡೆಸಿದ್ದಾರೆ ಎಂಬ ತಪ್ಪು ಸಂದೇಶಗ ರವಾನೆ ಸರಿಯಲ್ಲ: ಯಾವುದೇ ಒಂದು ಸಮುದಾಯವನ್ನು ಒಲೈಸುವ ಪ್ರಶ್ನೆಯಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಇಬ್ಬರು ಸಚಿವರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಕೇವಲ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎಂಬ ತಪ್ಪು ಸಂದೇಶಗಳನ್ನು ರವಾನಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *