ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 1 ವಾರ ಬಿರುಗಾಳಿ ಸಹಿತ rain ಮುನ್ಸೂಚನೆ

ರಾಜ್ಯದಲ್ಲಿ ಜೂನ್ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆ: 11 ಜಿಲ್ಲೆಗಳಿಗೆ Yellow alert

ಬೆಂಗಳೂರು: ದೇಶದ 16 ರಾಜ್ಯಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 1 ವಾರ ಕರ್ನಾಟಕದ ಹಲವೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ? ದಕ್ಷಿಣ ಕನ್ನಡ, ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಈ ಜಿಲ್ಲೆಗಳಲ್ಲಿ ಒಣಹವೆ: ನಾಳೆ ದಕ್ಷಿಣ ಕನ್ನಡ , ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು , ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಆದರೆ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ ಮಳೆಯಾಗಲಿದೆ.

ಮೂರು ದಿನ ಮಳೆ: ಮೇ 7ರಿಂದ 10 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಬಿರುಗಾಳಿಯೊಂದಿಗೆ (ಗಾಳಿಯ ವೇಗ ಗಂಟೆಗೆ 30-40 ಕಿ.ಮೀ.) ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 35 ಡಿಗ್ರಿ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ಇರಲಿದೆ. ಮೇ 7 ಹಾಗೂ 8 ರಂದು ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದ ವರ್ಷ ಬೆಂಗಳೂರಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಆದರೆ ವರ್ಷ ಇದುವರೆಗೆ 42%ರಷ್ಟು ಅಧಿಕ ವರ್ಷಧಾರೆಯಾಗಿದೆ. ಜೂನ್ ಮಧ್ಯ ಭಾಗದಲ್ಲಿ ಮುಂಗಾರು ನಗರವನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *