ಬೆಂಗಳೂರು: ಕರ್ನಾಟಕಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ವಿಚಾರದಲ್ಲಿ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಈಗಾಗಲೇ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಗುಡ್ನ್ಯೂಸ್ ನೀಡಿದೆ. ಇದೀಗ ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ವಿಸ್ತರಿಸಲಾಗುತ್ತಿದ್ದು ಈ ಬಗ್ಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಭರ್ಜರಿ ಅಪ್ಡೇಟ್ಸ್ ನೀಡಿದ್ದಾರೆ. ಕರ್ನಾಟಕಕ್ಕೆ ವಂದೇ ಭಾರತ ಎಕ್ಸ್ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ತಿಳಿಸಿರುವುದು ಅತ್ಯಂತ ಸಂತಸದ ಸಂಗತಿ ಅಂತ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇವರೊಂದಿಗೆ ಹಲವು ಬಾರಿ ಸಭೆಯನ್ನು / ಚರ್ಚೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಇವರ ಉಪಸ್ಥಿತಿಯಲ್ಲಿ ನಡೆದಿದ್ದು ಮತ್ತು ಒತ್ತಾಯಿಸಿದ್ದು ಇಲ್ಲಿ ಸ್ಮರಣೀಯ.