ಬೆಂಗಳೂರು || ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬ್ಯಾಂಕ್ಗಳಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ, ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಆರಂಭ.

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ವಿವರ: ಒಟ್ಟು ಹುದ್ದೆ 319

ಅಂಗನವಾಡಿ ಕಾರ್ಯಕರ್ತೆಯರು- 68

ಅಂಗನವಾಡಿ ಸಹಾಯಕಿಯರು- 251

ತಾಲೂಕುವಾರು ಹುದ್ದೆಗಳ ವಿವರ

ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು

ತಾಲೂಕು         ಅಂ. ಕಾರ್ಯಕರ್ತೆಯರು         ಅಂ. ಸಹಾಯಕಿಯರು

ಬಿಳಿಗೆರೆ            6          32

ಎಚ್ಡಿ ಕೋಟೆ

22        29

ಹುಣಸೂರು    5          26

ಕೃಷ್ಣರಾಜನಗರ           4          22

ಮೈಸೂರು ಗ್ರಾಮೀಣ   6          12

ಮೈಸೂರು ನಗರ          1          14

ನಂಜನಗೂಡು            10        31

ಪಿರಿಯಾ ಪಟ್ಟಣ         11        57

ಟಿ ನರಸೀಪುರ  3          28

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/ 3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್, ಸಂದರ್ಶನದ ಮೂಲಕ ಆಯ್ಕೆ.

ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnemakaone.kar.nic.in ಇಲ್ಲಿಗೆ ಭೇಟಿ ನೀಡಿ.

ಈ ಹುದ್ದೆಗೆ ಮೇ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್ 15 ಆಗಿದೆ

Leave a Reply

Your email address will not be published. Required fields are marked *