ಬೆಂಗಳೂರು : ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಆಂಧ್ರಪ್ರದೇಶ ಸರ್ಕಾರದ ಮನವಿಯ ಮೇರೆಗೆ ನೆರೆ ರಾಜ್ಯದಲ್ಲಿನ ಆನೆಗಳ ಉಪಟಳ ನಿಯಂತ್ರಿಸಲು ಪುಂಡಾನೆ ಸೆರೆ ಕಾರ್ಯಾಚರಣೆಗಾಗಿ ರಾಜ್ಯದಿಂದ ಕುಮ್ಕಿ ಆನೆಗಳನ್ನು ನೀಡಲು ಸಮ್ಮತಿಸಲಾಗಿದ್ದು, ವಿಧಾನಸೌಧದ ಪೂರ್ವದ್ವಾರ (ಹೈಕೋರ್ಟ್ ಎದುರು)ದ ಮೆಟ್ಟಿಲುಗಳ ಬಳಿ ಆನೆಗಳ ಹಸ್ತಾಂತರ ವಿಧ್ಯುಕ್ತವಾಗಿ ನೆರವೇರಿತು.
ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಹಿತು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆವರು ಸೇರಿದಂತೆ ಅನೇಕ ಗಣ್ಯರು… ಕುಮ್ಮಿ ಆನೆಗಳನ್ನು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ವಿಧ್ಯುಕ್ತವಾಗಿ ಹಸ್ತಾಂತರಿಸಲಿದ್ದರು.