ಬೆಳಗಾವಿ || ಲಂಚ ಸ್ವೀಕರಿಸುತ್ತಿದ್ದ ಇಬ್ಬರು Lokayukta staff ಬಲೆಗೆ : Computer operator ಅಸ್ವಸ್ಥ

ಬೆಳಗಾವಿ || ಲಂಚ ಸ್ವೀಕರಿಸುತ್ತಿದ್ದ ಇಬ್ಬರು Lokayukta staff ಬಲೆಗೆ : Computer operator ಅಸ್ವಸ್ಥ

ಬೆಳಗಾವಿ: ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಅಲ್ಲಿನ ಸೂಪರಿಂಟೆಂಟ್ ಮತ್ತು ಕಂಪ್ಯೂಟರ್ ಆಪರೇಟರ್ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಗ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಸೂಪರಿಟೆಂಡೆಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರ ವರ್ಗಾವಣೆಗೆ ಅಂಗನವಾಡಿ ಸಹಾಯಕಿಯಿಂದ 30 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆ ದೂರಿನ ಆಧಾರದ ಮೇರೆಗೆ ಲೋಕಾಯುಕ್ತ ಇನ್ಸಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 15 ಸಾವಿರ ಲಂಚದ ಹಣ ಸ್ವೀಕರಿಸುವಾಗಲೇ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥರಾದ ಘಟನೆ ಕೂಡ ನಡೆಯಿತು. ತಕ್ಷಣವೇ ಕಚೇರಿಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಚಾರಣೆ ಮುಂದುವರೆದಿದೆ.

Leave a Reply

Your email address will not be published. Required fields are marked *