ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ.

ದಿಗಂತ್ (28) ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ 20 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ. ಈತನ ತಂದೆ ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಕುಟುಂಬಸ್ಥರೊಂದಿಗೆ ಪೀಣ್ಯದ ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.
ಇಂದಿರಾನಗರದ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದು, ಪ್ರತಿದಿನ ಮೆಟ್ರೊದಲ್ಲಿ ಓಡಾಡುತ್ತಿದ್ದರು. ಪ್ರಯಾಣದ ವೇಳೆ ಮಹಿಳೆಯರ ಹಾಗೂ ಯುವತಿಯರ ವಿಡಿಯೋಗಳನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಮೆಟ್ರೋ ಚಿಕ್ಸ್ ಎಂಬ ಹೆಸರಿನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿದಿನ ಮೆಟ್ರೊದಲ್ಲಿ ಸಂಚರಿಸುತ್ತಿದ್ದ,ಪ,ೠ‘ಪರಿಂದ ಬ್ಲಾಗರ್ ಗಳಂತೆ ಈತ ಸಹ ಮೊಬೈಲ್ ನಲ್ಲಿ ಮೆಟ್ರೊ ಮಹಿಳಾ ಪ್ರಯಾಣಿಕರ ಆಕ್ಷೇಪಾರ್ಹ ವಿಡಿಯೊ ಸೆರೆಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಖಾತೆಯಲ್ಲಿನ ವಿಡಿಯೊಗಳನ್ನ ಡಿಲೀಟ್ ಮಾಡಿದ್ದಾನೆ. ಸದ್ಯ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು ಇಂದು ನ್ಯಾಯಾಲಯದ ಅನುಮತಿ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.




