ತುಮಕೂರು :- ಪ್ರತ್ಯೇಕ ಪೋಕ್ಸೊ ಪ್ರಕರಣಗಳಲ್ಲಿ ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ದಂಡ, ಮತ್ತೋರ್ವ ಆರೋಪಿಗೆ 20 ವರ್ಷ ಜೈಲು 1 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ತಿಪ್ಪೇಸ್ ಕುಮಾರ್, ಸೈಯದ್ ಸಫಿಕ್ ಶಿಕ್ಷೆಗೆ ಒಳಗಾದವರಾಗಿದ್ದಾರೆ. ಈ ಇಬ್ಬರ ವಿರುದ್ದವೂ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ತುಮಕೂರು ಎಫ್ ಟಿ ಎಸ್ ಸಿ 1 ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಜೀವಾವಧಿ ಶಿಕ್ಷೆ:- ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 2022 ರ ಮಾರ್ಚ್ 15 ರಂದು ನೊಂದ ಬಾಲಕಿಯ ತಾಯಿ ದೂರು ನೀಡಿದ್ದರು. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ ತಿಪ್ಪೇಸ್ ಕುಮಾರನಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
20 ವರ್ಷ ಜೈಲು: ಮತ್ತೊಂದು ಪ್ರಕರಣದಲ್ಲಿ 2023 ರ ಅಕ್ಟೋಬರ್ 19 ರಂದು ದೂರುದಾರರು ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಸೈಯದ್ ಶಫಿಕ್ ಗೆ 20 ವರ್ಷ ಜೈಲು, 1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ.ಎಸ್. ವಾದ ಮಂಡಿಸಿದ್ದರು.