ಮುಖ್ಯಮಂತ್ರಿ Siddaramaiah ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿ

ಮುಖ್ಯಮಂತ್ರಿ Siddaramaiah ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು.

•       ಆರ್ ಸಿ  ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

•        ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ  ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

•       ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ  ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

•       ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ  ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ  ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

•       ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು    ತೀರ್ಮಾನಿಸಲಾಗಿದೆ.

•       ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.

•       ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Leave a Reply

Your email address will not be published. Required fields are marked *