ಪ್ರಧಾನಿಯವರಿಗೆ ಅವಹೇಳನ ಮಾಡಿದ ವ್ಯಕ್ತಿಯನ್ನು ಬಂಧಿಸಲು ಪೊಲೀಸ್ ದೂರು: N. Ravikumar

ಪ್ರಧಾನಿಯವರಿಗೆ ಅವಹೇಳನ ಮಾಡಿದ ವ್ಯಕ್ತಿಯನ್ನು ಬಂಧಿಸಲು ಪೊಲೀಸ್ ದೂರು: N. Ravikumar

ಬೆಂಗಳೂರು: ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಟಿ.ಎಫ್.ಹಾದಿಮನಿ, ಮೋದಿಯವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಮೋದಿಜೀ ಅವರ ಬಗ್ಗೆ ಕೋಟ್ಯಂತರ ಜನರು ಗೌರವ- ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ ಎಂದು ತಿಳಿಸಿದರು. ಇದು ಮೋದಿಯವರಿಗೆ ಕೆಟ್ಟ ಹೆಸರು ತರುವ ದೊಡ್ಡ ತಪ್ಪು ಎಂದು ಆಕ್ಷೇಪಿಸಿದರು.

ಮೋದಿಯವರ ಚಾರಿತ್ರ್ಯವಧೆ ಮಾಡುವ ಹಾದಿಮನಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಯಶವಂತಪುರದ ಸೈಬರ್ ಪೋಲೀಸ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ವಕ್ತಾರ ಮತ್ತು ವಕೀಲ ವೆಂಕಟೇಶ ದೊಡ್ಡೇರಿ ಅವರು ದೂರುದಾರ ಎಂದು ತಿಳಿಸಿದರು. ಎಫ್ಐಆರ್ ಮಾಡುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *