ಕರ್ನಾಟಕ : ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ಕರ್ನಾಟಕ ಸರ್ಕಾರದ ಶಾಸಕರೇ ಸರ್ಕಾರದ ವಿರುದ್ಧವಾಗಿ ನೀಡಿರುವ ಹೇಳಿಕೆಯು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರವು ವಸತಿ ವಿಚಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಕಾಸಿಗಾಗಿ ಮನೆ ಎನ್ನುವ ವಿಚಾರವು ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರದ ಬಗ್ಗೆ ಭಾರೀ ಚರ್ಚೆ ನಡೆದಿದೆ. ಇದರ ನಡುವೆ ಸರ್ಕಾರಕ್ಕೆ ಭಾರೀ ಮುಜುಗರವಾಗುವ ಘಟನೆಯೊಂದು ನಡೆದಿದೆ.

ಹಣ ಕೊಟ್ಟವರಿಗೆ ಮಾತ್ರ ವಸತಿ ನಿಗಮದಲ್ಲಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಮತ್ತು ಅಳಂದ ಶಾಸಕ ಬಿ.ಆರ್.ಪಾಟೀಲ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಬಿ.ಆರ್ಪಾಟೀಲ ಅವರದ್ದು ಎನ್ನಲಾಗಿರುವ ಆಡಿಯೊದಲ್ಲಿ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ.