Yash’ ಅವರ ತಾಯಿ, ಮೊದಲ ಸಿನಿಮಾ ಬಿಡುಗಡೆ ದಿನಾಂಕ announced

Yash' ಅವರ ತಾಯಿ, ಮೊದಲ ಸಿನಿಮಾ ಬಿಡುಗಡೆ ದಿನಾಂಕ announced

ಯಶ್ ‘ಟಾಕ್ಸಿಕ್’ ಸಿನಿಮಾ ಘೋಷಿಸಿ ವರ್ಷಗಳಾಯ್ತು, ಸಿನಿಮಾ ಬಿಡುಗಡೆ ಆಗಲು ಇನ್ನೂ ಕನಿಷ್ಟ ಒಂದು ವರ್ಷ ಬೇಕಾಗುತ್ತದೆ. ಆದರೆ ಅವರ ತಾಯಿ ಪುಷ್ಪ ಅವರು ಏಪ್ರಿಲ್ ತಿಂಗಳಲ್ಲಿ ತಾವು ಸಿನಿಮಾ ನಿರ್ಮಾಣ ಮಾಡುತ್ತಿರುವುದಾಗಿ ಘೋಷಣೆ ಮಾಡಿದರು. ಇದೀಗ ಕೆಲವೇ ತಿಂಗಳಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

ಯಶ್  ನಟನೆಯ ‘ಟಾಕ್ಸಿಕ್’ ಸಿನಿಮಾದ ಘೋಷಣೆಯಾಗಿ ವರ್ಷಗಳಾಯ್ತು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾ ಬಿಡುಗಡೆ ಆಗುವುದಕ್ಕೆ ಕನಿಷ್ಟ ಒಂದು ವರ್ಷ ಬಾಕಿ ಇದೆ. ಯಶ್ ಬಲು ನಿಧಾನವಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಹಾಗಲ್ಲ, ಸಿನಿಮಾ ಘೋಷಿಸಿದ ಕೆಲವೇ ತಿಂಗಳಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೆ ಸಿನಿಮಾ ನಿರ್ಮಾಣ ಮಾಡುತ್ತಿರುವುದಾಗಿ ಹೇಳಿದ್ದ ಯಶ್ರ ತಾಯಿ ಪುಷ್ಪ, ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಯಶ್ ಅವರ ತಾಯಿ ಪುಷ್ಪ ಅವರು ಸಿನಿಮಾ ನಿರ್ಮಾಣ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಪುಷ್ಪ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಟೀಸರ್ ಅನ್ನು ಕಳೆದ ತಿಂಗಳು ಬಿಡುಗಡೆ ಮಾಡಿದ್ದರು. ಇದೀಗ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ‘ಕೊತ್ತಲವಾಡಿ’ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದಾರೆ. ಕಿರುತೆರೆ ನಟಿ ಕಾವ್ಯಾ ಶೈವ ಸಿನಿಮಾದ ನಾಯಕಿಯಾಗಿ ನಟಿಸುತ್ತಿದ್ದಾರೆ.

ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಸೇರಿದಂತೆ ಇನ್ನೂ ಕೆಲವು ಅನುಭವಿ ನಟರು ಸಿನಿಮಾನಲ್ಲಿ ಕೆಲಸ ಮಾಡಿದ್ದಾರೆ. ಪೃಥ್ವಿ ಅಂಬರ್ ಈ ವರೆಗೆ ನಟಿಸಿದ ಸಿನಿಮಾಗಳಲ್ಲಿ ಲವರ್ ಬಾಯ್ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಆದರೆ ‘ಕೊತ್ತಲವಾಡಿ’ ಸಿನಿಮಾನಲ್ಲಿ ಕಂಪ್ಲೀಟ್ ಮಾಸ್ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ನಲ್ಲಿ ಪೃಥ್ವಿ ಅವರು ಸಖತ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Leave a Reply

Your email address will not be published. Required fields are marked *