ಧಾರವಾಡ || ಜಿಲ್ಲಾ ಉಸ್ತುವಾರಿ ಸಚಿವ Santhosh Lad ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಧಾರವಾಡ || ಜಿಲ್ಲಾ ಉಸ್ತುವಾರಿ ಸಚಿವ Santhosh Lad ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಧಾರವಾಡ:  ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಸ್ವಚ್ಛತಾ ಕಾರ್ಯಕ್ಕೆ ಚಾಲನೆ ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಸುತ್ತ ಮುತ್ತಲಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಕೆಳ ಹಂತದ ಕಾಲುವೆಯ ಸ್ಥಿತಿಗತಿಗಳನ್ನು ಪರಿಶೀಲಿಸಲಾಯಿತು. ಆದಷ್ಟು ಬೇಗ ದುಸ್ಥಿತಿಯಲ್ಲಿರುವ ಕಾಲುವೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರ ವಾರ್ಡಿನಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಸಚಿವರು ವಿತರಿಸಿದರು.

Leave a Reply

Your email address will not be published. Required fields are marked *