ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ನಡೆಸುತಿದ್ದು, ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದ್ದು, 30ನೇ ಜೂನ್ 2025 ರವರೆಗೆ ಅಂತಿಮವಾಗಿ ಅವಧಿ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸಿರುವ ಕುರಿತು ಖಾತರಿಪಡಿಸಿಕೊಳ್ಳುವ ಸಲುವಾಗಿ ಪಾಲಿಕೆಯ ತಂಡವು ಮನೆ-ಮನೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ.
ನಗರದಾದ್ಯಂದ ಪರಿಶಿಷ್ಟ ಸಮೀಕ್ಷಾ ಕಾರ್ಯವು ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿರುವ ಕುರಿತು ಖಾತರಿಪಡಿಸಿಕೊಂಡು ಮನೆಯ ಬಾಗಿಲು ಅಥವಾ ಗೋಡೆಗೆ ಸ್ಟಿಕ್ಕರ್ ಅಂಟಿಸಲಾಗುತ್ತಿದೆ