Heavy Rainfall || ಶಿವಮೊಗ್ಗದಲ್ಲಿ ಭಾರಿ ಮಳೆ : ಶಾಲಾ ಕಾಲೇಜುಗಳಿಗೆ ರಜೆ

ಚಂಡಮಾರುತ ಪ್ರಭಾವದಿಂದ ಇಂದು ಭಾರೀ ಮಳೆ! ಬೆಂಗಳೂರು ಹವಾಮಾನ ವರದಿ

ಶಿವಮೊಗ್ಗಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಾಂತ ಭಾರಿ ಮಳೆಯಾಗುತ್ತಿರುವುದರಿಂದ ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಈ ಕುರಿತು ಮೂರು ತಾಲೂಕಿನ ತಹಶೀಲ್ದಾರ್​ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳು ಅಪ್ಪಟ ಮಲೆನಾಡಿನ ತಾಲೂಕು. ಇಲ್ಲಿ ಪ್ರತಿ ವರ್ಷ ಉತ್ತಮ ಮಳೆ ಅಗುತ್ತದೆ. ಅಲ್ಲದೇ ತಾಲೂಕಿನ ವಿವಿಧ ಭಾಗಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳಗಳನ್ನು ದಾಟಿಕೊಂಡು ದೂರದ ಊರುಗಳಿಂದ ಬಸ್​ನಲ್ಲಿ ಆಗಮಿಸುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ತಾಲೂಕು ಆಡಳಿತ ತಮ್ಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದೆ.

ಇಂದು ರಜೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಶನಿವಾರ ದಂದು ಪೂರ್ಣ ತರಗತಿಗಳನ್ನು ನಡೆಸಬೇಕೆಂದು ಆದೇಶಿಸಲಾಗಿದೆ.‌

ರಾಜ್ಯದ ಕೆಲವು ಕಡೆಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 3 ರಿಂದ ಅಂದರೆ ಇಂದಿನಿಂದ ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬಿತ್ತನೆ ಮಾಡುವ ಮತ್ತು ಮಾಡಲು ಅಣಿಯಾಗಿರುವ ರೈತರ ಆತಂಕಕ್ಕೆ ಕಾರಣವಾಗಿದೆ.

ಯೆಲ್ಲೋ ಅಲರ್ಟ್​​ ಘೋಷಿಸಿದ ಹವಾಮಾನ ಇಲಾಖೆಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣಉಳಿದ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳವರೆಗೆ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಮಳೆಗಿಂತ ಗಾಳಿ ವೇಗ ಹೆಚ್ಚು ಇರಲಿದೆ ಎಂದು ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *