Darshan ಮತ್ತೆರಡು ದಿನ ರಿಲೀಫ್; ಸುಪ್ರೀಂನಲ್ಲಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ.

Darshan ಮತ್ತೆರಡು ದಿನ ರಿಲೀಫ್; ಸುಪ್ರೀಂನಲ್ಲಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ.

ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್ ದರ್ಶನ್ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ವಿಚಾರಣೆ ಇಂದು (ಜುಲೈ 22) ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾಕ್ಕೆ ಮುಂದೂಡಲ್ಪಟ್ಟಿದೆರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ಗೆ ಎರಡು ದಿನ ರಿಲೀಫ್ ಸಿಕ್ಕಿದೆ. ಜಾಮೀನು ರದ್ದತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ದರ್ಶನ್ ಪರ ವಕೀಲರ ವಾದ ಮಂಡನೆಗೆ ಸಮಯಾವಕಾಶ ಕೋರಿದ ಕಾರಣ ಈ ಮುಂದೂಡಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ನ ನಿರ್ಧಾರ ದರ್ಶನ್ ಅವರ ಭವಿಷ್ಯ ಮತ್ತು ಅವರ ‘ಡೆವಿಲ್’ ಚಿತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ದರ್ಶನ್ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತೆ ಆಗಿದೆ.

‘ದರ್ಶನ್ ಪರ ಕಪಿಲ್ ಸಿಬಲ್ ವಾದ ಮಂಡಿಸಬೇಕಿತ್ತು.. ಆದರೆ, ಅವರಿಗೆ ಬೇರೆ ಪ್ರಕರಣದಲ್ಲಿ ಇಂದು ವಾದ ಮಂಡಿಸಬೇಕಿದೆ. ನಿನ್ನೆ ರಾತ್ರಿ ನನಗೆ ಈ ಕೇಸ್ ಬಂತು. ಆದರೆ, ಇಷ್ಟು ಬೇಗ ಕೇಸ್ನ ವಾದ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಒಂದು ಒಂದು ದಿನ ಸಮಯ ಕೇಳಿದ್ದೇನೆ. ಇದಕ್ಕೆ ಸುಪ್ರೀಂಕೋರ್ಟ್ ಸಮ್ಮತಿ ಕೊಟ್ಟಿದೆ. ಹೀಗಾಗಿ, ಈ ಅರ್ಜಿ ವಿಚಾರಣೆ ಗುರುವಾರಕ್ಕೆ (ಜುಲೈ 24) ಮುಂದೂಡಲ್ಪಟ್ಟಿದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಸಿದ್ದಾರ್ಥ್ ದವೆ ಹೇಳಿಕೆ ನೀಡಿದ್ದಾರೆ.

‘ನಾನು ಬಂಧನದ ಕಾರಣಗಳ ಬಗ್ಗೆ ವಾದ ಮಂಡಿಸುವುದಿಲ್ಲ. ಕೇಸ್ನ ಮೆರಿಟ್ಸ್ ಮೇಲೆ ವಾದ ಮಂಡಿಸುತ್ತೇನೆ’ ಎಂದು ಕೂಡ ಅವರು ಹೇಳಿದ್ದಾರೆ. ಹೀಗಾಗಿ, ದರ್ಶನ್ ಕೇಸ್ನಲ್ಲಿ ಗುರುವಾರ ತೀರ್ಪು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *