5 ಹುಲಿಗಳ ಸಾ*ವು ಪ್ರಕರಣ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋದ ಸಿಬಿಐ

Supreme Court of India

ನವದೆಹಲಿ: ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಅಲ್ಲದೇ, ವನ್ಯಜೀವಿ ಅಭಯಾರಣ್ಯಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದೆ. ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಮಲೆ ಮಹದೇಶ್ವರ (ಎಂಎಂ) ಬೆಟ್ಟಗಳ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ತಿಂಗಳು ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಮತ್ತು ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ 80% ಖಾಲಿ ಇವೆ ಎಂದು ನ್ಯಾಯಾಲಯವು ಬೇಸರ ವ್ಯಕ್ತಪಡಿಸಿದೆ

ಎಲ್ಲಾ ರಾಜ್ಯಗಳನ್ನು ಸೇರಿಸಿಕೊಂಡು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಹುದ್ದೆ ಖಾಲಿ ಇದೆ. ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (ಎಂಒಇಎಫ್‌ಸಿಸಿ) ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸಿಜೆಐ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠ ಸೂಚಿಸಿದೆ.

ವನ್ಯಜೀವಿ ಮತ್ತು ಪರಿಸರ ಸಮಸ್ಯೆಗಳ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡುವ ತಜ್ಞರ ಸಂಸ್ಥೆಯಾದ ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ)ಯ ವರದಿಯನ್ನು ನ್ಯಾಯಾಲಯ ಪರಿಗಣಿಸುತ್ತಿತ್ತು. ಇದು ಒಂದೇ ಘಟನೆಯಲ್ಲಿ ವರದಿಯಾದ ಅತಿ ಹೆಚ್ಚು ಹುಲಿ ಸಾವುಗಳು ಎಂದು ಸಮಿತಿ ಹೇಳಿದೆ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ರಚಿಸಿದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಂಶೋಧನೆಗಳನ್ನು ಸಿಇಸಿ ಮಂಡಿಸಿತು. ಇದು ಹುಲಿಗಳ ಸಾವು ವಿಷಪ್ರಾಶನದಿಂದ ಉಂಟಾಗಿದೆ. ಹುಲಿಗಳು ತಿಂದ ದನದ ಮೃತದೇಹದ ಮೇಲೆ ಕೀಟನಾಶಕ ಸಿಂಪಡಿಸಿದ ಗ್ರಾಮಸ್ಥರದ್ದು ಉದ್ದೇಶಪೂರ್ವಕ ಕೃತ್ಯ ಎಂದು ತೀರ್ಮಾನಿಸಿತು.

Leave a Reply

Your email address will not be published. Required fields are marked *