ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಮ್ಮೆ ನಿರಾಸೆಯಾಗಿದೆ.

ಹೊಳೆನರಸೀಪುರದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಜಾಮೀನು ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆಯಾಗಿದೆ. ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಬಳಿಕ ಇದೀಗ ಎರಡನೇ ಬಾರಿಗೂ ಸಹ ಜಾಮೀನು ಕೋರಿದ್ದ ಪ್ರಜ್ವಲ್ ಗೆ ಕೋರ್ಟ್ ಶಾಕ್ ಕೊಟ್ಟಿದೆ.
ಈ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್ ಜಾಮೀನು ಕೋರಿ ಕಳೆದ ಜೂನ್ನಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು