ಕಲಬುರಗಿ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆಯೇ? ಅಂತ ಹರಿದಾಡುತ್ತಿರುವ ಪ್ರಶ್ನೆಗಳಿಗೆ ಅವರ ಮಗ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಸಿಡುಕಿನಿಂದ ಉತ್ತರ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಲೋಕ ಸಭಾ ಚುನಾವಣೆ ನಡೆಯುವಾಗ ಮಾಧ್ಯಮದವರು ಖರ್ಗೆ ಅವರನ್ನು ಪ್ರಧಾನ ಮಂತ್ರಿ ಮಾಡುತ್ತಾರೆ, ರಾಜ್ಯದಲ್ಲ ಏನಾದರೂ ರಾಜಕೀಯ ಬೆಳವಣಿಗೆ ನಡೆದರೆ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆ ಅವರು ಹೇಳಿದ್ದೇ ಒಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರೋದು ಮತ್ತೊಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.