ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಡಿಸೆಂಬರ್ನಲ್ಲಿ ಬಿಡುಗಡೆ ಆಗಲಿದೆ. ಈಗ ಪ್ರಭಾಸ್ ‘ಫೌಜಿ’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಲಿದೆ. ಸಂದೀಪ್ ರೆಡ್ಡಿ ವಂಗಾ, ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.
ಪ್ರಭಾಸ್ ನಟನೆಯ ಸಿನಿಮಾ ಬಿಡುಗಡೆ ಆಗಿ ವರ್ಷಕ್ಕೂ ಹೆಚ್ಚು ಸಮಯ ಆಗಿದೆ. ಅವರ ಮುಂದಿನ ಸಿನಿಮಾ ‘ದಿ ರಾಜ್ ಸಾಬ್’ ಈಗಾಗಲೇ ಎರಡು ಬಾರಿ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಇದೇ ವರ್ಷ ‘ದಿ ರಾಜ್ ಸಾಬ್’ ಬಿಡುಗಡೆ ಆಗಲಿದೆ. ಪ್ರಭಾಸ್ ‘ದಿ ರಾಜ್ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಅದರ ಜೊತೆಗೆ ‘ಫೌಜಿ’ ಸಿನಿಮಾದ ಚಿತ್ರೀಕರಣವನ್ನೂ ಬಹುತೇಕ ಪೂರ್ಣಗೊಳಿಸಿದ್ದಾರೆ. ಇದೀಗ ಪ್ರಭಾಸ್ ನಟನೆಯ ಮತ್ತೊಂದು ಸಿನಿಮಾದ ಚಿತ್ರೀಕರಣದ ದಿನಾಂಕ ಹೊರಬಿದ್ದಿದೆ.
ತಮ್ಮ ವೈಯಲೆಂಟ್, ಔಟ್ ಆಧಿ ಬಾಕ್ಸ್ ಸಿನಿಮಾಗಳಿಂದ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಸಿನಿಮಾನಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಸಿನಿಮಾಕ್ಕೆ ‘ಸ್ಪಿರಿಟ್’ ಎಂದು ಹೆಸರಿಟ್ಟಿದ್ದು ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ಸಂದೀಪ್ ಅವರು ಸಿನಿಮಾದ ಚಿತ್ರೀಕರಣಕ್ಕೆ ಎಲ್ಲ ಸಜ್ಜಾಗಿದ್ದು, ಸಿನಿಮಾದ ಚಿತ್ರೀಕರಣ ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬುದನ್ನು ಇತ್ತೀಚೆಗಿನ ಸಂದರ್ಶನದಲ್ಲಿ ಹೇಳೀಕೊಂಡಿದ್ದಾರೆ.
ವಿಜಯ್ ದೇವರಕೊಂಡ ನಟನೆಯ ‘ಕಿಂಗ್ಡಮ್’ ಸಿನಿಮಾದ ಪ್ರಚಾರಕ್ಕಾಗಿ ಮಾಡಿದ್ದ ಪಾಡ್ಕಾಸ್ಟ್ ಒಂದರಲ್ಲಿ ಮಾತನಾಡಿರುವ ಸಂದೀಪ್ ರೆಡ್ಡಿ ವಂಗಾ, ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭ ಮಾಡಲಿದ್ದೇವೆ ಎಂದು ಖಚಿತಪಡಿಸಿದ್ದಾರೆ. ಮಾತ್ರವಲ್ಲದೆ, ಕೇವಲ ಒಂದೇ ಸ್ಟ್ರೆಚ್ನಲ್ಲಿ ಇಡೀ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರಂತೆ. ಅಂದರೆ ಸುಮಾರು ನಾಲ್ಕೈದು ತಿಂಗಳಲ್ಲಿ ಇಡೀ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ ಸಂದೀಪ್ ರೆಡ್ಡಿ ವಂಗಾ.