ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು ನಾಳೆಯಿಂದ ಅನಿರ್ದಾಷ್ಟವಧಿಗೆ ಮುಷ್ಕರ ಆರಂಭಿಸಲಿದ್ದಾರೆ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಇವತ್ತು ನಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಇದು ಬೇರೆ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಯೆಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದರೂ; ಯಾವುದೇ ಸಮಸ್ಯೆ, ಪರಿಸ್ಥಿತಿಯನ್ನು ನಿಭಾಯಿಸಲು ತಮ್ಮ ಸರ್ಕಾರ ಸಮರ್ಥವಾಗಿದೆ ಎಂದು ಹೇಳಿದರು.
ಸಿಎಂ ಜೊತೆ ನಡೆಯುವ ಮಾತುಕತೆ ವಿಫಲಗೊಂಡರೆ ಮುಷ್ಕರ ಶುರುವಾಗೋದು ನಿಶ್ಚಿತ, ಹಾಗಾಗಿ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆಯೇ ಅಂತ ಕೇಳಿದರೆ ಎಲ್ಲ ಕಡೆಯೂ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.
For More Updates Join our WhatsApp Group: