ಬೆಂಗಳೂರು: ಶಾಸಕ ಕೆಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಯಾವ ಕಾರಣಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಇರುವ ಭ್ರಷ್ಟಾಚಾರ ಏನು? ಎಷ್ಟು ಹಣ ಹೊಡೆದಿದ್ದಾರೆ, ಎಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಬೇಕು. ಕೆಎನ್ ರಾಜಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿದ್ದವರು. ಅವರ ರಾಜೀನಾಮೆ ಪಡೆಯಲು ಕಾರಣವೇನು? ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಪ್ರಶ್ನಿಸಿದರು.
For More Updates Join our WhatsApp Group :