ಬೆಂಗಳೂರು : ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿರೂ ಆಗಿರುವ ಡಿಕೆ ಶಿವಕುಮಾರ್ ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಭೆಯಲ್ಲಿ ಬೆಂಗಳೂರು ನಗರದ ಶಾಸಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಬೆಂಗಳೂರಿನ ಆಡಳಿತದ ಬಗ್ಗೆ ಚರ್ಚಿಸಲಾಗಿದೆ ಎಂದರು.
ಬೆಂಗಳೂರು ಮಹಾನಗರ ಪಾಲಿಕೆಯ ವಿಭಜನೆ ಮತ್ತು ಐದು ಪಾಲಿಕೆಗಳ ರಚನೆಯ ಕುರಿತು ಸಹ ಚರ್ಚೆ ನಡೆದಿದೆ. ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕರಿಗೆ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಚುನಾವಣೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
For More Updates Join our WhatsApp Group :