ರೇಣುಕಾಸ್ವಾಮಿ ಕೊ* ಪ್ರಕರಣ: ಜಾಮೀನು ರದ್ದು, ಪವಿತ್ರಾ ಗೌಡ ಬಂಧನ..!

ರೇಣುಕಾಸ್ವಾಮಿ ಕೊ* ಪ್ರಕರಣ: ಜಾಮೀನು ರದ್ದು, ಪವಿತ್ರಾ ಗೌಡ ಬಂಧನ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು.ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆಯಲಿದ್ದಾರೆ. ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತಿನಿ ಎಂದು ಪವಿತ್ರಾ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು.ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆಯಲಿದ್ದಾರೆ. ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತಿನಿ ಎಂದು ಪವಿತ್ರಾ ಹೇಳಿದ್ದಾರೆ.

ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮೇರೆಗೆ ಸುಪ್ರೀಂ ಕೋರ್ಟ್ ನ ನ್ಯಾ ಜೆಬಿ ಪಾರ್ದಿವಾಲಾ ಹಾಗೂ ಆರ್ ಮಹಾದೇವನ್ರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.

ಹೈಕೋರ್ಟ್ ಆದೇಶ ವಿಕೃತತೆಯಿಂದ ಕೂಡಿದೆ, ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನ ಪ್ರತಿಬಿಂಬಿಸುತ್ತದೆ.ಜಾಮೀನು ಮಂಜೂರು ಮಾಡುವುದರಿಂದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ.ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಕಾನೂನು ಎಲ್ಲರಿಗೂ ಒಂದೆ ಎಂಬ ಸಂದೇಶವನ್ನು ಸುಪ್ರೀಂಕೋರ್ಟ್ ನೀಡಿದೆ.ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ, ನಾವು ಅದನ್ನ ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳಲ್ಲ ಎಂದ ನ್ಯಾ ಪಾರ್ದಿವಾಲಾ ಹೇಳಿದ್ದಾರೆ.

ಜೈಲಿನಲ್ಲಿ ಆರೋಪಿಗಳಿಗೆ ವಿಶೇಷ ಸೌಲಭ್ಯ ಅಥವಾ ಚಿಕಿತ್ಸೆ ವಿರುದ್ಧವೂ ಕೋರ್ಟ್ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳಿಗೆ ವಿಶೇಷ ಸೌಲಭ್ಯ ಪಂಚತಾರಾ ಸೌಲಭ್ಯ ನೀಡಲಾಗುತ್ತಿದೆ ಎಂದು ನಮಗೆ ದೃಢಪಟ್ಟ ದಿನವೇ ಸೂಪರಿಂಟೆಂಡೆಂಟ್ ಹಾಗೂ ಇತರ ಅಧಿಕಾರಗಳ ಅಮಾನತು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *