ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ.

ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ.

ಕೊಡಗು: ಮಡಿಕೇರಿ ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್  ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ.

ರಾಜಾಸೀಟ್ನಲ್ಲಿ ಗ್ಲಾಸ್ ಬ್ರಿಡ್ಜ್ ಮಾಡುವುದಿಲ್ಲ ಎಂದ ಶಾಸಕ ಮಂತರ್ ಗೌಡ

ಇನ್ನು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಹಿತಿ ನೀಡಿದ್ದು, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು.

ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆಯುವ ಮೊದಲು ಅಲ್ಲಿಗೆ ಭೂ ವಿಜ್ಞಾನಿಗಳನ್ನ, ಪರಿಸರ ಇಲಾಖೆ ತಜ್ಞರನ್ನ ಕರೆಸಿ ವಿವಿಧ ಪರೀಕ್ಷೆಗಳನ್ನು ಮಾಡಬೇಕಿತ್ತು. ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಲು ಈ ಜಾಗ ಸುರಕ್ಷಿತವಾಗಿದೆ ಎಂಬ ಫೀಸಿಬಿಲಿಟಿ ಚೆಕ್ ಮಾಡಬೇಕಿತ್ತು. ಆದರೆ ಯಾವುದನ್ನೂ ಮಾಡದೆ ತೋಟಗಾರಿಕಾ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಈಗಲೇ ರಾಜಾಸೀಟ್ನಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರ ಒತ್ತಡ ತಾಳಲಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಗ್ಲಾಸ್ ಬ್ರಿಡ್ಜ್ ಮಾಡಿದರೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನದಿಂದ ಪ್ರಕೃತಿಯ ಮೇಲೆ ಇನ್ನಷ್ಟು ಒತ್ತಡ ಬೀಳಲಿದೆ ಎಂಬ ಮಾತು ಕೇಳಿಬಂದಿತ್ತು. ಅದೂ ಅಲ್ಲದೆ ಗುಡ್ಡ ಕೊರೆದು ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಿದರೆ ಭೂ ಕುಸಿತವಾಗಿ ಪ್ರವಾಸಿಗರ ಜೀವಕ್ಕೂ ಕುತ್ತು ಬರಬಹುದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *