ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಠಾತ್ ಪ್ರವಾಹ ಉಂಟಾಗಿ 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ 24 ಗಂಟೆಗಳಲ್ಲಿ ರಕ್ಷಣಾ ಹೆಲಿಕಾಪ್ಟರ್ನ ಐದು ಸಿಬ್ಬಂದಿ ಸೇರಿದಂತೆ 300 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ.ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯಿತು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿತು, ಮರಗಳು ಉರುಳಿಬಿದ್ದಿದ್ದವು.
ಧಾರಾಕಾರ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸಿದವು, ರಸ್ತೆಗಳು ಕೊಚ್ಚಿಹೋಗಿವೆ ಮತ್ತು ಹಲವಾರು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ.ಬೀದಿಗಳು ಜಲಮಾರ್ಗಗಳಾಗಿ ಮಾರ್ಪಟ್ಟಿರುವುದನ್ನು, ಕಾರುಗಳು ತೇಲುತ್ತಿರುವುದನ್ನು ಮತ್ತು ಅವ್ಯವಸ್ಥೆಯ ನಡುವೆ ಪರಿಹಾರ ಕಾರ್ಯಾಚರಣೆ ನಡೆಸಲು ರಕ್ಷಣಾ ಕಾರ್ಯಕರ್ತರು ಹೆಣಗಾಡುತ್ತಿರುವುದನ್ನು ತೋರಿಸುತ್ತವೆ.
For More Updates Join our WhatsApp Group :




