ಚಾಮರಾನಗರ : ಧರ್ಮಸ್ಥಳ ಶವ ಶೋಧ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕ ಬಂದಿದೆ. ನಿನ್ನೆ ಶವ ಶೋಧಕ್ಕೆ ಬ್ರೇಕ್ ಹಾಕಿದ್ದ ಎಸ್‌ಐಟಿ, ಠಾಣೆಗೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನ ಕರೆಸಿಕೊಂಡು ಕೋರ್ಟ್ ಗೆ ತಂದಿದ್ದ ಬುರುಡೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆದ್ರೆ ಎಸ್‌ಐಟಿ ತನಿಖೆಯಲ್ಲಿ ಏನೇನು ಆಗಿದೆ ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಎಸ್‌ಐಟಿ ತನಿಖೆಯ ಪ್ರಾಥಮಿಕ ಮಾಹಿತಿ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಇದರ ಬೆನ್ನಲ್ಲೇ ಇದುವರೆಗೂ ಧರ್ಮಸ್ಥಳ ಶವ ಶೋಧದ ಎಸ್‌ಐಟಿ ತನಿಖೆಯ ವರದಿ ಬಗ್ಗೆ ನಾಳೆ(ಆಗಸ್ಟ್ 18) ಸದನದಲ್ಲಿ ವಿವರಿಸಲು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಂದಾಗಿದೆ.
ಈ ಸಂಬಂಧ ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಾಳೆ ಸದನದಲ್ಲಿ ಸಂಪೂರ್ಣ ಉತ್ತರ ಕೊಡಲು ಪ್ರಯತ್ನ ಮಾಡುತ್ತೇನೆ. ಯಾರೂ ಕೂಡ ಈ ಪ್ರಕರಣದಲ್ಲಿ ರಾಜಕಾರಣ ಮಾಡಬಾರದು. ಇದು ನ್ಯಾಯ ಮತ್ತು ಕಾನೂನಿಗೆ ಸಂಬಂಧಪಟ್ಟಂತಹ ವಿಚಾರವಾಗಿದೆ. ಯಾರೇ ದೂರು ಕೊಟ್ಟರೂ ಎಫ್ಐಆರ್ ದಾಖಲಿಸಿ ತನಿಖೆ ಮಾಡೋದು ಸಹಜ. ಧಾರ್ಮಿಕ ವಿಚಾರದಲ್ಲಿ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ, ಅದು ಅಂತಿಮವಾಗಲಿ. ಮಧ್ಯಂತರ ವರದಿ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ದೂರುದಾರ ಹೇಳಿದಂತೆ ಕೂರುವುದಕ್ಕೆ ಆಗುವುದಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
For More Updates Join our WhatsApp Group :

