ರಾಯಚೂರು : ರಾಯಚೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ರಸ್ತೆ ಕೂಡ ಸಂಪೂರ್ಣ ಜಲಾವೃತಗೊಂಡಿದೆ. ನಗರದ ಯಕ್ಲಾಸಪುರ ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಕಸ ವಿಲೆವಾರಿ ಘಟಕಕ್ಕೆ ಮಾರ್ಗ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ರಸ್ತೆ ಮೂರು ದಿನಗಳಿಂದ ಇದೇ ರೀತಿ ಜಲಾವೃತಗೊಂಡಿದ್ದರೂ ಪಾಲಿಕೆ, ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
For More Updates Join our WhatsApp Group :