ದೆಹಲಿ, ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತ : ಸಂತಾನ ಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಿ. । Stray Dog

ದೆಹಲಿ, ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತ : ಸಂತಾನ ಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಿ. । Stray Dog

ನವದೆಹಲಿ: ಬೀದಿ ನಾಯಿಗಳಿಗೆ  ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.  ದೆಹಲಿ ಹಾಗೂ ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ-ಎನ್ಸಿಆರ್ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.

ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸುವ ಅಥವಾ ರೇಬೀಸ್ ಸೋಂಕಿಗೆ ಒಳಗಾದ ನಾಯಿಗಳಿಗೆ ಮೊದಲು ಲಸಿಕೆ ಹಾಕಬೇಕು ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿದೆ.ದೆಹಲಿ-ಎನ್ಸಿಆರ್ ಪ್ರದೇಶವನ್ನು ಬೀದಿ ಬೀದಿಗಳಿಂದ ಹೊರಹಾಕಲು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. 2024 ರಲ್ಲಿ ಕನಿಷ್ಠ 37 ಲಕ್ಷ ನಾಯಿ ಕಡಿತ ಮತ್ತು 54 ಶಂಕಿತ ರೇಬೀಸ್ ಸಾವುಗಳು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳಿಗೆ ಆಹಾರ ನೀಡಬಾರದು. ಯಾವುದೇ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೋರ್ಟ್ ಆದೇಶವನ್ನು ವಿರೋಧಿಸಿ ನಗರದಲ್ಲಿ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಹಾಗೂ ಶ್ವಾನ ಪ್ರಿಯರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು.ಬೀದಿ ನಾಯಿಗಳು ನೆರೆಹೊರೆಯ ಭಾಗವಾಗಿದೆ. ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಬದಲು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ಲಸಿಕೆ ನೀಡಿ. ಬೀದಿ ನಾಯಿಗಳನ್ನು ಬೀದಿಗಳಲ್ಲಿಯೇ ಬದುಕಲು ಬಿಡಿ ಎಂದು ಒತ್ತಾಯಿಸಿದ್ದರು.

ಇದೀಗ ಇಂದು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಲ್ಲಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡದೆ, ಅವುಗಳಿಗೆ ಕೇವಲ ಲಸಿಕೆ ಹಾಗೂ ಸಂತಾನ ಹರಣ ಚಿಕಿತ್ಸೆ ಮಾಡಿಸಿ ಮತ್ತೆ ಅಲ್ಲಿಯೇ ತಂದು ಬಿಡಿ ಎಂದು ಹೇಳಿದೆ.

ನ್ಯಾ.ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು, ಆ.11ರಂದು ದೆಹಲಿ-ಎನ್ಸಿಆರ್ ಸುತ್ತಮುತ್ತಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನಗಳಿಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಆದೇಶವನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ವಿ ಅಂಜಾರಿಯಾ ಅವರಿದ್ದ ಪೀಠವು ಕಾಯ್ದಿರಿಸಿತ್ತು.

ಬೀದಿ ನಾಯಿಗಳ ಸಂಪೂರ್ಣ ಸಮಸ್ಯೆಗೆ ಸ್ಥಳೀಯ ಅಧಿಕಾರಿಗಳ ನಿಷ್ಕ್ರಿಯತೆಯೇ ಕಾರಣ ಎಂದು ಹೇಳಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಬೀದಿ ನಾಯಿ ಕಡಿತವು ವಿಶೇಷವಾಗಿ ಮಕ್ಕಳಲ್ಲಿ ರೇಬೀಸ್ಗೆ ಕಾರಣವಾದ ಬಗ್ಗೆ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ಜು.28 ರಂದು ಪ್ರಾರಂಭವಾಗಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *