ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಸಂಬಂಧ ಚರ್ಚೆ ನಡೆಯುತ್ತಿರುವಾಗ ಡಿಸಿಎಂ ಡಿಕೆ ಶಿವಕುಮಾರ್ RSS ‘ನಮಸ್ತೇ ಸದಾ ವತ್ಸಲೇ’ ಗೀತೆ ಹಾಡಿ ಗಮನ ಸೆಳೆದಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರಿ ಚರ್ಚೆಯಾಗಿದೆ.
ಇದೀಗ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಕಮ್ಯುನಿಸ್ಟ್ ಪಕ್ಷ, ಜನತಾ ದಳ ಮತ್ತು ಬಿಜೆಪಿ ಹಾಗೂ ಆರ್ಎಸ್ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ. ಪ್ರತಿಯೊಂದು ಪಕ್ಷದಲ್ಲೂ, ಸಂಘಟನೆಯಲ್ಲೂ ಒಳ್ಳೆಯ ಮತ್ತು ಕೆಟ್ಟ ಗುಣಗಳಿರುತ್ತವೆ ಎಂದು ಹೇಳಿದ್ದಾರೆ. ಒಳ್ಳೆಯದನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.