ರಾಯಚೂರು : ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.
ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಜಿಲ್ಲೆಗಳ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
For More Updates Join our WhatsApp Group :