ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ.

ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ.

ಪಾಟ್ನಾ : ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮಾಡುತ್ತಿರುವುದರಿಂದ ಸಾಕಷ್ಟು ಅನುಕೂಲವಾದಂತೆ ತೋರುತ್ತಿದೆ. ನಕಲಿ ಮತದಾರರು ಒಬ್ಬೊಬ್ಬರೇ ಹೊರಗೆ ಬೀಳುತ್ತಿದ್ದಾರೆ. ಬಿಹಾರದ ಮತದಾರರ ಪಟ್ಟಿಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಹೆಸರಿರುವುದು ಪತ್ತೆಯಾಗಿದೆ.

1956 ರಲ್ಲಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಇಬ್ಬರು ಮಹಿಳೆಯರನ್ನು ಬಿಹಾರದಲ್ಲಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ಅವರ ಹೆಸರುಗಳನ್ನು ಪರಿಶೀಲಿಸಲಾಗಿದೆ.

ವೀಸಾ ಅವಧಿ ಮುಗಿದ ನಂತರವೂ ವಿದೇಶಿಯರು ಇಲ್ಲಿ ನೆಲೆಸಿರುವ ಬಗ್ಗೆ ಗೃಹ ಸಚಿವಾಲಯ ನಡೆಸಿದ ತನಿಖೆಯ ಸಂದರ್ಭದಲ್ಲಿ ಅವರ ಹೆಸರುಗಳು ಬೆಳಕಿಗೆ ಬಂದಿವೆ. ಈ ಇಬ್ಬರು ಮಹಿಳೆಯರನ್ನು ಭಾಗಲ್ಪುರ ಜಿಲ್ಲೆಯಲ್ಲಿ ಗುರುತಿಸಲಾಗಿದೆ. ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದು, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.

ಅವರ ಹೆಸರುಗಳಲ್ಲಿ ಒಂದು ಇಮ್ರಾನಾ ಖಾನಮ್, ಅವರಿಗೆ ವಯಸ್ಸಾಗಿರುವ ಕಾರಣ  ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಆದೇಶದಂತೆ, ನಾನು ಫಾರ್ಮ್ ಅನ್ನು ಭರ್ತಿ ಮಾಡಿ ಅವರ ಹೆಸರನ್ನು ತೆಗೆದುಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅವರ ಪಾಸ್‌ಪೋರ್ಟ್ 1956 ರದ್ದಾಗಿದ್ದು, ಅವರಿಗೆ 1958 ರಲ್ಲಿ ವೀಸಾ ಸಿಕ್ಕಿತ್ತು. ಅವರು ಪಾಕಿಸ್ತಾನದವರು. ತನಿಖೆಯ ಮುಂದಿನ ಹಂತವನ್ನು ಇಲಾಖೆ ನಡೆಸುತ್ತದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರ ಮತದಾರರ ಪಟ್ಟಿಯಿಂದ ಅನರ್ಹರನ್ನು ತೆಗೆದುಹಾಕಲು ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ನಡೆಸುತ್ತಿದೆ. ಬಿಜೆಪಿಯ ಆದೇಶದ ಮೇರೆಗೆ ಚುನಾವಣಾ ಸಂಸ್ಥೆಯು ಪಟ್ಟಿಯಿಂದ ಜನರನ್ನು ತೆಗೆದುಹಾಕುತ್ತಿದೆ ಎಂದು ವಿರೋಧ ಪಕ್ಷಗಳು ಹೇಳಿಕೊಂಡಿದ್ದರಿಂದ ಈ ಕಾರ್ಯವು ಸಾಕಷ್ಟು ಟೀಕೆಗೆ ಗುರಿಯಾಯಿತು.

ರಾಹುಲ್ ಗಾಂಧಿ ಜನರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮದತಾರರ ಅಧಿಕಾರ ಯಾತ್ರೆ ಆರಂಭಿಸಿದ್ದು,1,300 ಕಿ.ಮೀ ದೂರದವರೆಗೆ ರಾಹುಲ್ ಗಾಂಧಿ ಯಾತ್ರೆ ಕೈಗೊಂಡಿದ್ದಾರೆ. 23 ಜಿಲ್ಲೆಗಳನ್ನು ಕ್ರಮಿಸಲಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *